ಕಲಬುರಗಿ: ಕನ್ನಡ ಸಾಹಿತ್ಯ ಸಮ್ಮೇಳನ ಸಾಮಾಜಿಕ ಜಾತ್ರೆಯಾಗದೆ ನಮ್ಮ ನೆಲದ ಕನ್ನಡ ಸಂಸ್ಕøತಿ, ಪರಂಪರೆ ವೈಭವ, ಮಾತೃಭಾಷೆ, ನೆಲ-ಜಲದ ಬಗ್ಗೆ ಇಂದಿನ ಹೊಸ ಪೀಳಿಗೆಯಲ್ಲಿ ಅಭಿಮಾನದ ಕಿಚ್ಚನ್ನು ಹೊತ್ತಿಸುವ ನಿಟ್ಟಿನಲ್ಲಿ ಸಮ್ಮೇಳನ ನಡೆಯಲಿ ಎಂದು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ. 26 ಮತ್ತು 27ರಂದು ನಗರದಲ್ಲಿ ಹಮ್ಮಿಕೊಳ್ಳಲುದ್ದೇಶಿಸಲಾಗಿರುವ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದಂಗವಾಗಿ ಹೊರ ತಂದಿರುವ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕನ್ನಡದ ಮನಸ್ಸುಗಳನ್ನು ಒಂದುಗೂಡಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸದಾ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಸಾಪ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕವಿ-ಸಾಹಿತಿಗಳಿಂದ ನಮ್ಮ ಕನ್ನಡ ಭಾಷೆ ಶ್ರೀಮಂತವಾಗಿದೆ. ಕನ್ನಡ ಭಾಷೆ ಬೆಳವಣಿಗೆಗೆ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕನ್ನಡದ ಕಂಪನ್ನು ಜಿಲ್ಲೆಯಲ್ಲೆಡೆ ಪಸರಿಸಲು ಈ ಸಾಹಿತ್ಯ ಸಮ್ಮೇಳನ ಪೂರಕವಾಗಲಿದೆ ಎಂದರು.
ಕಸಾಪ ರಾಜ್ಯ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು, ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ, ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾದ ಸೋಮಶೇಖರ ಜಮಶೆಟ್ಟಿ, ವಿವಿಧ ಜಿಲ್ಲೆಗಳ ಅಧ್ಯಕ್ಷರಾದ ಬಿ. ವಾಮದೇಪ್ಪ, ಶರಣೆಗೌಡ ಪಾಟೀಲ, ಸೂರಿ ಶ್ರೀನಿವಾಸ, ವಿವೇಕಾನಂದಗೌಡ ಪಾಟೀಲ, ಡಾ. ಲಿಂಗರಾಜ ಅಂಗಡಿ, ನೀಲಾವರ ಸುರೇಂದ್ರ ಅಡಿಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.