ಸುರಪುರ: ತಾಲೂಕಿನ ಹೆಮನೂರ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಭಾಗವಹಿಸಿದ್ದ ಅನೇಕ ಜನರು ಗ್ರಾಮದಲ್ಲಿ ಸ್ವಚ್ಛತೆ,ಚರಂಡಿಗಳ ಹೂಳೆತ್ತುವುದು,ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು,ಶಾಲಾ ಶೌಚಾಲಯ,ಕಂಪೌಂಡ್ ನಿರ್ಮಾಣ,ಸಮುದಾಯ ಶೌಚಾಲಯ ನಿರ್ಮಾಣದ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್,ಗ್ರಾಮ ಪಂಚಾಯತಿ ಅಧ್ಯಕ್ಷೆ ಶರಣಮ್ಮ ಎಮ್.ಕುರಕುಂದಿ,ಅಲ್ಲದೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅನೇಕ ಜನ ಸಾರ್ವಜನಿಕರು ಭಾಗವಹಿಸಿದ್ದರು.