ಬಿಸಿ ಬಿಸಿ ಸುದ್ದಿ

0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯ; ಜಿಲ್ಲಾಧಿಕಾರಿ

ಕಲಬುರಗಿ: ಯಾವುದೇ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆ ವಂಚಿತರಾಗದಂತೆ ಅಧಿಕಾರಿಗಳು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.

ಬುಧುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ 2024ರ ಜಿಲ್ಲಾಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಪ್ರತಿ ಮಗು ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಹೆಚ್ಚಿನ ಪ್ರಚಾರ ನೀಡಬೇಕು. ಪ್ರತಿಶತ 100 ರಷ್ಟು ಗುರಿ ಸಾಧಿಸಬೇಕೆಂದರು. 2024ರ ಮಾರ್ಚ್ 3 ರಿಂದ 6 ರವರೆಗೆ ನಾಲ್ಕು ದಿನಗಳ ಕಾಲ ಒಂದು ಸುತ್ತಿನ ಪಲ್ಸ್ ಪೊಲೀಯೋ ಕಾರ್ಯಕ್ರಮ ಇದಾಗಿದ್ದು, ಮಾರ್ಚ್ 3ರಂದು ಭಾನುವಾರದಂದು ಪೋಲಿಯೊ ಭೂತ ಮುಖಾಂತರ 0-5 ವರ್ಷದ ಮಕ್ಕಳಿಗೆ ಬಾಯಿಯ ಮೂಲಕ 2 ಹನಿ ಪೊಲೀಯೋ ಲಸಿಕೆಯನ್ನು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.

ಅಂದು ನಡೆಯುವ ಕಾರ್ಯಕ್ರಮಕ್ಕೆ ಜೆಸ್ಕಾಂ ಅಧಿಕಾರಿಗಳು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಬೇಕು. ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯುತರು ತಮಗೆ ನೀಡಿದ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದರು.
ಹೆಚ್ಚಿನ ಜಾಗೃತಿ ಮೂಡಿಸಲು ಗ್ರಾಮ ಪಂಚಾಯತ್, ತಾಲೂಕ ಪಂಚಾಯತ್ ಪಟ್ಟಣ ಪಂಚಾಯತ್‍ಗಳಲ್ಲಿ ಟಾಸ್ಕ್ ಫೋರ್ಸ ಸಭೆಯ ಸಂಬಂಧಪಟ್ಟ ಅಧಿಕಾರಿಗಳು ಕರೆಯಬೇಕು ಬ್ಯಾನರ್‍ಗಳಲ್ಲಿ ಮತ್ತು ಆಟೋಗಳಲ್ಲಿ ಹೆಚ್ಚಿನ ಪ್ರಚಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಳಿದ 3 ದಿನಗಳು ಆರೋಗ್ಯ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆಯನ್ನ ನೀಡಲಾಗುವುದು ಎಂದರು.

ಈ ಪೋಲಿಯೊ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯಲ್ಲಿನ ಒಟ್ಟು ಗುರಿ 341961 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮನೆಗಳು 572864 ಭೇಟಿ ನೀಡುವ ಗುರಿಹೊಂದಿದೆ ಪೋಲಿಯೊ ಭೂತಗಳು 1517, ಮನೆಗೆ ಭೇಟಿ ನೀಡುವ ತಂಡಗಳು 1517 ಟ್ರಾಂಸಿಟ್ ತಂಡಗಳು (ಬಸ್ ನಿಲ್ದಾಣ/ ರೈಲು ನಿಲ್ದಾಣ) 135, ಸಂಚಾರಿ ತಂಡಗಳು -32 ಈ ಕಾರ್ಯಕ್ರಮದಲ್ಲಿ ಒಟ್ಟು 330 ಪೋಲಿಯೊ ಕಾರ್ಯಕ್ರಮದ ಮೇಲ್ವಿಚಾರಕರು ಹಾಗೂ 3368 ಲಸಿಕೆ ನೀಡುವ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಕಾರ್ಯಕ್ರಮದ ಕುರಿತು ಪೋಲಿಯೊ ಸರ್ವಕ್ಷಣಾಧಿಕಾರಿಗಳಾದ ಡಾ. ಅನೀಲಕುಮಾರ ತಾಳಿಕೋಟಿ,Wಊಔ ರವರ ಪಿಪಿಟಿ ಮುಖಾಂತರ ವಿವರಣೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ಸ್ವಾಮಿ, ಆರ್.ಸಿ.ಹೆಚ್ ಅಧಿಕಾರಿ ಡಾ. ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧಿಕ್ಷಕರು, ಡಾ.ಅಂಬರಾಯ ರುದ್ರವಾಡಿ, ಜಿಲ್ಲಾ ಜಿಮ್ಸ ಆಸ್ಪತ್ರೆ, ಪ್ರಾಂಶುಪಾಲರುಗಳಾದ ಡಾ,ವಿ,ಜಿ,ರೆಡ್ಡಿ. ,ಡಾ,ರವಿಕಾಂತಿ ಜಿಲ್ಲಾ ತರಬೇತಿ ಕೇಂದ್ರ ಉಪನಿರ್ದೇಶಕರು, ಮಹಿಳಾ ಮಕ್ಕಳ ಅಭಿವೃಧಿ ಇಲಾಖೆ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಎಲ್ಲಾ ಆರೋಗ್ಯಯ ಕಾರ್ಯಕ್ರಮಧಿಕಾರಿಗಳು, ಎಲ್ಲಾ ತಾಲೂಕು ಆರೋಗ್ಯಧಿಕಾರಿಗಳು,ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು,ಎಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇನ್ನೂಳಿದ ಇಲಾಖೆಗಳು ಅಲ್ಪಸಂಖ್ಯಾಂತರ ಇಲಾಖೆಯ ಸಿಬ್ಬಂದಿಗಳಿದರವರು ಹಾಗೂ ಇನ್ನೂಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿದ್ದವರು ಹಾಜರಿದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago