ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಬೀದಿ ನಾಯಿಗಳ ಹಾವಳಿ

ಶಹಾಬಾದ: ನಗರದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.ಇದಕ್ಕೆ ಉದಾಹರಣೆ ಎಂಬಂತೆ ನಗರದ ಹಳೆಶಹಾಬಾದನಲ್ಲಿ ಮಹಿಳೆಯ ಮೇಲೆ ನಾಯಿಗಳ ಗುಂಪು ಕೈ ಹಾಗೂ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸದಂತಹ ಘಟನೆ ನಡೆದಿದೆ.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಎಲ್ಲೆಂದರಲ್ಲಿ ಓಡಾಡುತ್ತಿರುವ ಬೀದಿನಾಯಿಗಳ ಕಾಟದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಹರಸಾಹಸ ಪಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದವರಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಿಗ್ಗೆ ಶಾಲೆಗಳು ತೆರೆಯುವ ಹಾಗೂ ಸಂಜೆ ಬಿಡುವ ವೇಳೆಯಲ್ಲಿ ಶಾಲಾ ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ನಗರಸಭೆ ಆರೋಗ್ಯ ನಿರೀಕ್ಷಕರು ಕೇವಲ ನಗರದ ಸ್ವಚ್ಛತೆ ಜತೆಗೆ ನಗರದಲ್ಲಿ ನಿತ್ಯ ಎಗ್ಗಿಲ್ಲದೇ ಓಡಾಡುತ್ತಿರುವ ಬೀಡಾಡಿ ಹಸುಗಳು ಹಾಗೂ ಬೀದಿ ನಾಯಿಗಳ ಹಾವಳಿ ತಡೆಯುವಲ್ಲಿ ವಿಫಲರಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ನಗರಸಭೆಗೆ ಸ್ಥಳೀಯರು ಅನೇಕ ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ನಗರಸಭೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ಪಟ್ಟಣದ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಶಾಸ್ತ್ರಿ ವೃತ್ತ, ನೆಹರು ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಅನೇಕ ವೃತ್ತಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸಂತಾನ ತಡೆ ಚಿಕಿತ್ಸೆ ಮಾಡಬಹುದು.

ಆದರೆ, ಈ ಕಾರ್ಯಕ್ಕೆ ನಗರಸಭೆ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಶಾಲೆಗೆ ಬರುವ ಚಿಕ್ಕ ಮಕ್ಕಳ ಮೇಲೆ ಎರಗಿದರೇ ಹೇಗೆ ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ.ಕೂಡಲೇ ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

ನಗರದ ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ – ಅನ್ವರ್ ಪಾಶಾ, ನಾಗಣ್ಣ ರಾಂಪೂರೆ, ಶರಣಗೌಡ ಪಾಟೀಲ ಸ್ಥಳೀಯ ನಿವಾಸಿಗಳು.

ಬೆಳಿಗ್ಗೆ ಶಾಲೆಗೆ ಹೋಗುವ ಸಂದರ್ಭದಲ್ಲಿ ನಾಯಿಗಳ ಗುಂಪೊಂದು ಮಹಿಳೆಯ ಕೈ ಹಾಗೂ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸದಂತಹ ಘಟನೆ ಬುಧವಾರ ನಗರದ ಹಳೆಶಹಾಬಾದನಲ್ಲಿ ನಡೆದಿದೆ.

ಹಳೆಶಹಾಬಾದ ನಿವಾಸಿ ಅಫ್‍ಸರ್ ಬೇಗಂ ಹಳೆಶಹಾಬಾದನ ಉರ್ದು ಶಾಲೆಯಲ್ಲಿ ಅಡುಗೆ ಸಹಾಯಕಿ.ಈಕೆ ಎಂದಿನಂತೆ ಬೆಳಿಗ್ಗೆ ಶಾಲೆಗೆ ಸಮೀಪ ಬಂದಾಗ ಆರೇಳು ನಾಯಿಗಳು ಗುಂಪು ಒಮ್ಮೆಲೆ ದಾಳಿ ನಡೆಸಿ, ಕೈ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸಿವೆ. ನಾಯಿಗಳ ಕಡಿತಕ್ಕೆ ಮಹಿಳೆ ಚೀರಾಡಿ, ಅಲ್ಲಿಂಗ ಓಡಿ ಹೋದರೂ, ನಾಯಿಗಳು ಅಟ್ಟಾಡಿಸಿ ಕಚ್ಚಿ ಘಾಸಿಗೊಳಿಸಿವೆ.ತಕ್ಷಣವೇ ಸಮೀಪದಲ್ಲಿದ್ದ ಜನರು ಓಡಿ ಬಂದು ನಾಯಿಗಳನ್ನು ಓಡಿಸಿದ್ದಾರೆ.ಅದೃಷ್ಟವಶ ನಾಯಿಗಳಿಂದ ಮಹಿಳೆ ಪಾರಾಗಿದ್ದಾಳೆ.ಮಹೀಲೆಯನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

13 hours ago