ಬಿಸಿ ಬಿಸಿ ಸುದ್ದಿ

SKILL DEVELOPMENT; ಪ್ರಸಕ್ತ ವರ್ಷ ರಾಜ್ಯದೆಲ್ಲೆಡೆ 7.50 ಕೋಟಿ ವೆಚ್ಚದಲ್ಲಿ 50 ಕೆಫೆಸಂಜೀವಿನಿ ಸ್ಥಾಪನೆ

  • ಶುಚಿ-ರುಚಿ ಆಹಾರ: ಮಹಿಳೆಯರಿಂದಲೇ ನಿರ್ವಹಣೆ

ಬೆಂಗಳೂರು, ಫೆ 16 – ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನುಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತುಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆನೀಡಿದರು.

ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿಕಿಯೋಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆಎಂದರು.

ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನುಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು.

ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು.

ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನುರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತುಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಮಾಡುವುದಾಗಿ ಹೇಳಿದ್ದಾರೆ. ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ ಅಂದಾಜು 120 ಕೋಟಿ ರೂ.ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್‍, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್‍, ಎಂಜನಿಯರಿಂಗ್, ರೋಬೊಟೆಕ್ಸ್‍ಘಿ ಇತ್ಯಾದಿಹೆಚ್ಚುವರಿ ಡಿಪ್ಲೊಮಾ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್‍ಸಿ ಯಂತ್ರವನ್ನುಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಲನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‍ನ್ನು ಆಯೋಜಿಸಲಾಗುವುದು ಎಂದುತಿಳಿಸಿದ್ದಾರೆ.

ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆïಟ್ರೈನಿಂಗ್(ಡಿಎಸ್‍ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳುಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿವಿಸ್ತರಿಸಲಾಗುವುದು ಎಂದಿದ್ದಾರೆ.

ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರುಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡುವುದಾಗಿಹೇಳಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

56 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

59 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago