ಬಿಸಿ ಬಿಸಿ ಸುದ್ದಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ; ಸಿಎಂಗೆ ಅಭಿನಂದನೆ ಸಲ್ಲಿಸಿದ ಕಲಬುರಗಿ ಸದಸ್ಯರು

ಕಲಬುರಗಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.

ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಹಕ್ಕೊತ್ತಾಯ ಮಂಡಿಸಲಾಗಿತ್ತು. ಸಿಎಂ ಅಂದು ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.

ಅದೇರೀತಿಯಾಗಿ ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಪ್ರತಿ ವರ್ಷ ಸರ್ಕಾರ ಪತ್ರಕರ್ತರಿಗೆ ಪ್ರಶಸ್ತಿ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿರುವುದು ಸಿಎಂ ಹಾಗೂ ಅವರ ಸಹುದ್ಯೋಗಿಗಳಿಗೆ ಸಂಘ ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago