ಬಿಸಿ ಬಿಸಿ ಸುದ್ದಿ

ಪೀಠ ಬೇಡ, ಸಂಶೋಧನಾ ಕೇಂದ್ರ ಸ್ಥಾಪಿಸಿ; ಕಡಕೋಳ ಶ್ರೀ ಮಠದ ಡಾ. ರುದ್ರಮುನಿ ಶಿವಾಚಾರ್ಯರರು ಆಗ್ರಹ

ಕಲಬುರಗಿ: ಕಡಕೋಳದಲ್ಲಿಯೇ ‘ತತ್ವಪದಕಾರ ಶ್ರೀ ಕಡಕೋಳ ಮಡಿವಾಳೇಶ್ವರರ ಅಧ್ಯಯನ ಸಂಶೋಧನಾ ಕೇಂದ್ರ’ವನ್ನು ಸರಕಾರ ಸ್ಥಾಪನೆ ಮಾಡಬೇಕು ಎಂದು ಶ್ರೀ ಕಡಕೋಳ ಮಡಿವಾಳೇಶ್ವರ ಮಹಾಮಠದ ಪೀಠಾಧಿಪತಿ ಡಾ.ರುದ್ರಮುನಿ ಶಿವಾಚಾರ್ಯರರು ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಮಂಡಿಸಿದ 15ನೇ ಬಜೆಟ್‌ನಲ್ಲಿ ಘೋಷಿಸಲಾದ ‘ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ’ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿವಿಯಲ್ಲಿ ಪೀಠಗಳ ಸ್ಥಾಪನೆಗೆ ಮುಂದಾಗಿರುವುದು ಸೂಕ್ತವೆನಿಸುತ್ತಿಲ್ಲ. ಕಲ್ಯಾಣ ಕರ್ನಾಟಕದ ತತ್ವಪದ ಸಾಹಿತ್ಯ ಕ್ಷೇತ್ರದಲ್ಲಿ ಶ್ರೀ ಕಡಕೋಳ ಮಡಿವಾಳೇಶ್ವರರು ಅಗ್ರಗಣ್ಯರು. ಆದರೆ ಸಾಮೂಹಿಕವಾಗಿ ತತ್ವಪದಕಾರರಲ್ಲಿ ಕಡಕೋಳ ಮಡಿವಾಳಪ್ಪರನ್ನು ಸೇರಿಸಿ ಪೀಠ ಸ್ಥಾಪನೆಗೆ ಮುಂದಾಗಿರುವುದು ಕಡಕೋಳ ಮಡಿವಾಳಪ್ಪನಿಗೆ ಮಾಡಿದ ಮಹಾ ಅಪಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಈ ಭಾಗದ ಸಚಿವರು, ಶಾಸಕರು ಕಲ್ಯಾಣ ಕರ್ನಾಟಕದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕಡಕೋಳ ಗ್ರಾಮದಲ್ಲಿ ‘ತತ್ವಪದಕಾರ ಶ್ರೀ ಕಡಕೋಳ ಮಡಿವಾಳೇಶ್ವರರ ಅಧ್ಯಯನ ಸಂಶೋಧನಾ ಕೇಂದ್ರ’ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು, ಅನುಯಾಯಿಗಳು ಮತ್ತು ಭಕ್ತರು ಒತ್ತಾಯಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago