ಕಲಬುರಗಿ: ಸಿದ್ದರಾಮಯ್ಯರವರ ನೇತೃತ್ವದ ಈ ಸರ್ಕಾರದ ಮೇಲೆ ರಾಜ್ಯದ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೇ ಈ ಬಜೆಟ್ ನಲ್ಲಿ ರೈತರನ್ನ ಕಡೆಗಣಿಸಲಾಗಿದೆ. ಇದು ಸಂಪೂರ್ಣವಾಗಿ ರೈತರನ್ನ ಕಡೆಗಣಿಸಿದ ಬಜೆಟ್ ಆಗಿದೆ ಎಂದು ಕಲಬುರಗಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ರವರು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ವಾಡಿಕೆಯಂತೆ ಮಳೆಯಾಗದ ಕಾರಣದಿಂದಾಗಿ ಬಿತ್ತನೆ ಮಾಡಿದ ಬೆಳೆಗಳನ್ನು ಕಳೆದುಕೊಂಡಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗಿದ್ದ ಸರ್ಕಾರ ಇದುವರೆಗೂ ಸೂಕ್ತವಾದ ಬರ ಪರಿಹಾರವನ್ನು ನೀಡಿಲ್ಲ.
ಬಜೆಟ್ ನಲ್ಲಿ ಆದರೂ ಕೃಷಿ ಕ್ಷೇತ್ರಕ್ಕೆ ಉತ್ತಮ ಯೋಜನೆ ರೂಪಿಸುತ್ತಾರೆ. ಆ ಮೂಲಕ ರಾಜ್ಯ ಸರ್ಕಾರದವರು ನಮ್ಮ ಕೈ ಹಿಡಿಯುತ್ತಾರೆ ಎಂದು ನಂಬಿಕೊಂಡು ಕುಳಿತಿದ್ದ ಅನ್ನದಾತರ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹುಸಿಗೊಳಿಸಿದೆ. ರೈತರೇ ದೇಶದ ಬೆನ್ನೆಲುಬು ಎಂದು ಬರಿ ಬಾಯಿ ಮಾತಿನಿಂದ ಹೇಳಿದರೆ ಸಾಕಾಗುತ್ತಾ ಎಂದು ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಬಾಲರಾಜ್ ಗುತ್ತೇದಾರ ರವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಯಾವುದೇ ಗ್ಯಾರಂಟಿ ಯೋಜನೆ ನೀಡಿಲ್ಲ: ಗ್ಯಾರಂಟಿ ಯೋಜನೆಗಳ ಮಧ್ಯದಲ್ಲಿ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡು ಕುಳಿತಿದ್ದರು. ರೈತರ ಸಾಲಮನ್ನಾ ಮಾಡಬೇಕು. ಬೆಂಬಲ ಬೆಲೆ ನೀಡಬೇಕು ಎಂಬುದು ರೈತರ ಒತ್ತಾಯವಾಗಿತ್ತು. ಈ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ರೈತರಿಗೆ ಯಾವುದೇ ಯೋಜನೆ ರೂಪಿಸಿಲ್ಲ.
ಬರಗಾಲ ಬಂದಿದೆ. ರೈತರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಆಗಿದೆ. ರೈತರಿಗೆ ಧೈರ್ಯ ತುಂಬುವ ಯಾವುದೇ ಯೋಜನೆ ಕೂಡ ಈ ಬಜೆಟ್ ನಲ್ಲಿ ಇಲ್ಲ. ಮಹತ್ವದ ನೀರಾವರಿ ಯೋಜನೆಗಳು ಕೂಡ ಇಲ್ಲ.
ಈ ಸರ್ಕಾರ ಸಾಲಮನ್ನಾವಂತು ಮಾಡಿಲ್ಲ. ಕೊನೆ ಪಕ್ಷ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವನ್ನಾದರು ನೀಡಬೇಕಾಗಿತ್ತು. ಆದರೆ ಆ ಕೆಲಸವನ್ನು ಈ ಸರ್ಕಾರ ಮಾಡಿಲ್ಲ ಎಂದು ಬಾಲರಾಜ್ ಗುತ್ತೇದಾರ ರವರು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನಲ್ಲಿ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರೈತರ ಕಲ್ಯಾಣಕ್ಕಾಗಿ ಯಾವುದೇ ಯೋಜನೆ ರೂಪಿಸಿಲ್ಲ.ತೊಗರಿ ಅಭಿವೃದ್ಧಿ ಮಂಡಳಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.ಇದೊಂದು ರೈತರ ವಿರೋಧಿ ಬಜೆಟ್ ಆಗಿದ
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…