ಕಲಬುರಗಿ: ಭಾರತೀಯ ಜನತಾ ಪಾರ್ಟಿ ಎಸ್.ಟಿ. ಮೋರ್ಚಾ ಕರ್ನಾಟಕ ಎಸ್ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನಾಗಿ ನಂದಕುಮಾರ್ ನಾಯಕ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ತಿಳಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.