ರಾಜ್ಯದ ಅಭಿವೃದ್ಧಿಗೆ ಇದೊಂದು ಉತ್ತಮ ಬಜೆಟ್

0
45

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಅಭಿವೃದ್ಧಿಯ ಬಜೆಟ್ ಇದಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ತಿಳಿಸಿದ್ದಾರೆ.

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುμÁ್ಠನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿಸಿದ್ದಾರೆ, ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ.

Contact Your\'s Advertisement; 9902492681

ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೇ ನಮ್ಮ ಸರಕಾರ ಮಾದರಿಯಾಗಿ ಹೊರ ಹೊಮ್ಮಿದೆ.ಕೃಷಿ ಉತ್ತೇಜನಕ್ಕೆ ರೈತ ಸಮೃದ್ಧಿ ಯೋಜನೆ ಜಾರಿ, ಷಿ ಭಾಗ್ಯ’ ಮರುಜಾರಿ, ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸಿರುವುದು, 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿಯಿಂದ 15 ಲಕ್ಷ ರೂಪಾಯಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ.

ಮಳೆಯ ಕೊರತೆಯಿಂದಾಗಿ ಸಣ್ಣ ನೀರಾವರಿ ಕೆರೆಗಳ ವಿನ್ಯಾಸಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ಸಮೀಪದ ಜೀವ ನದಿಗಳಿಂದ ತುಂಬಿಸಲು ಯೋಜನೆಗಳನ್ನು ಕೈಗೊಳ್ಳಲು ಗಣನೀಯ ಪ್ರಮಾಣದ ವೆಚ್ಚ ಮಾಡಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಬ್ಯಾಹ್ಯಾಕಾಶದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಟೆಲಿಸ್ಕೋಪ್ ನೀಡುವ ಯೋಜನೆಯನ್ನ ಘೋಷಿಸಿದ್ದಾರೆ.

ಮೊದಲ ಹಂತದಲ್ಲಿ 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದು ದೂರದರ್ಶಕವನ್ನು ನೀಡಲು 3 ಕೋಟಿ ಅನುದಾನ ನೀಡಿದ್ದಾರೆ. ಈ ಬಜೆಟ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ 5 ಸಾವಿರ ಕೋಟಿ ಮೀಸಲಿಟ್ಟಿರುವುದು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರಕಾರ ಬದ್ದತೆಯನ್ನ ತೋರಿದೆ. ಒಟ್ಟಾರೆ. ಈ ಬಜೆಟ್ ಉತ್ತಮ ಬಜೆಟ್ ಆಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here