ಜೇವರ್ಗಿ; ತಾಲೂಕ ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಾಗೂ ಇಟಗಾ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಂವಿಧಾನ ಜಾಗೃತಿ ಜಾಥಾ ಹಾಗೂ ಡಾ.ಅಂಬೇಡ್ಕರ್ ಸ್ಥಬ್ದ ಚಿತ್ರವನ್ನು ಶುಕ್ರವಾರ ವಿವಿಧ ವಾದ್ಯ ಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು.
ಕುಂಬ ಮೇಳ, ಡೊಳ್ಳು ಕುಣಿತ, ನೃತ್ಯ ಕೋಲಾಟದೊಂದಿಗೆ ಇಟಗಾ ಗ್ರಾಮದ ಕ್ರಾಸ್ ನಿಂದ ಗ್ರಾಮದ ರಾಜ ಬೀದಿಯ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ತಲುಪಿ ಅಂಬೇಡ್ಕರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಬಳಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಉದ್ಘಾಟಿಸಿ ಅವರು ಮಾತನಾಡಿ, ‘ಸಂವಿಧಾನವು ಸಮಾನತೆ ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರವಹಿಸಿದೆ. ಸಂವಿಧಾನದ ಮಹತ್ವ ಮನೆ ಮನೆಗೆ ತಲುಪಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಜಾಗೃತಿ ಜಾಥಾ ಮೂಲಕ ಮಾಡುತ್ತಿದೆ’ ಇದೊಂದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.
ಪ್ರತಿಯೊಬ್ಬರೂ ಸಂವಿಧನಾ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಂವಿಧಾನ ಪೀಠಿಕೆ ಓದಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಮಕ್ಕಳಿಂದ ನೃತ್ಯ, ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಂಬಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿ ಸೋಮಶೇಖರ ಜಾಡರ್, ತಾಲೂಕ ಆರೋಗ್ಯ ಅಧಿಕಾರಿ ಸಿದ್ದು ಪಾಟೀಲ,ಪೋಲಿಸ್ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಶಾಲಾ ಶಿಕ್ಷಕರು, ಗ್ರಾಮದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಾಕ್ಷಿ ಪಾಟೀಲ ಸ್ವಾಗತಿಸಿ ವಂದಿಸಿದರು ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…