ಕಲಬುರಗಿ ವಿಭಾಗದಪಟ್ಟಣ ಸಹಕಾರ ಬ್ಯಾಂಕ್ ಅಧಿಕಾರಗಳ ತರಬೇತಿ

0
34
  • ಕಾನೂನು ನಿಯಮಗಳ ಅಡಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಶೇಖರಗೌಡ ಮಾಲಿ ಪಾಟೀಲ್ ಕರೆ ನೀಡಿದ್ದಾರೆ.

ಕಲಬುರಗಿ: ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಕಾನೂನು ನಿಯಮಗಳನ್ನು ಅರ್ಥ ಮಾಡಿಕೊಂಡು ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡಲು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲರು ಕರೆ ನೀಡಿದರು.

ನಗರದ ಗ್ಯಾಂಡ್ ಹೋಟೇಲ್ ನಲ್ಲಿ ನಡೆದ ಕಲಬುರಗಿ ವಿಭಾಗದ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೂ ಸಹ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಹೊಂದಿರುತ್ತದೆ. ಅದನ್ನು ಹೋಗಲಾಡಿಸಲು ಎಲ್ಲರೂ ಪ್ರಯತ್ನಿಸಬೇಕೆಂದರು. ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಸಂಗ್ರಹಣೆ, ಸಾಲ ವಿತರಣೆ, ಸಾಲ ವಸೂಲಾತಿಯೊಂದಿಗೆ ಆದ್ಯತೆ ನೀಡಬೇಕೆಂದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ವ್ಯವಸ್ಥೆ ಮಾಡುವ ತರಬೇತಿ ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸೂಚಿಸಿದರು.

ಸಮಾರಂಭದಲ್ಲಿ ಮಾತನಾಡಿದ ಕಲಬುರಗಿ ವಿಭಾಗದ ಜಂಟಿ ನಿಬಂಧಕರಾದ ವಿಶ್ವನಾಥ್ ಮಲ್ಕೋಡ್ ಅವರು ಪಟ್ಟಣ ಸಹಕಾರ ಬ್ಯಾಂಕುಗಳು ಕಾನೂನು ನಿಯಮಗಳನ್ನು, ರಿಸರ್ವ್ ಬ್ಯಾಂಕ್ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಜನರ ವಿಶ್ವಾಸಕ್ಕೆ ಪಾತ್ರರಾಗಬೇಕೆಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಲಬುರಗಿ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ವೀರಾರೆಡ್ಡಿ ಅವರು ವಹಿಸಿದ್ದರು.

ಪ್ರಾರಂಭದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಅರುಣ್ ಕುಮಾರ್ ಅರಸೂರು ಅವರು ಸ್ವಾಗತಿಸಿದರು. ಸಲಹೆಗಾರರಾದ ಪಿ. ರುದ್ರಪ್ಪನವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈಲಜಾಚೌಹಾಣ್ ಅವರು ವಂದನಾರ್ಪಣೆಯನ್ನು ಮಾಡಿದರು. ಮಂಜುಳಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಅಭಿಯಂತರರಾದ ಮಲ್ಲಯ್ಯಶೆಟ್ಟಿಯವರು ಕಾರ್ಯಕ್ರಮದ ಸಂಚಾಲಕರಾಗಿ, ಆಯೋಜಿಸಿದ್ದರು.

ಸಮಾರಂಭದಲ್ಲಿ ಸಹಾಯಕ ನಿಬಂಧಕರಾದ ಸಂಜಯ್ ಕಪೂರ್, ತರಬೇತಿ ಕೇಂದ್ರದ ಉಪನ್ಯಾಸಕರಾದ ರಾಜೇಶ್ ಯಾವಗಲ್ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here