ಕಲಬುರಗಿ; ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಇತಿಹಾಸದಲ್ಲೇ 15 ಬಜೆಟ್ ಮಂಡಿಸಿದ ಏಕೈಕ ಮುಖ್ಯಮಂತ್ರಿ ಎಂಬ ಐತಿಹಾಸಿಕ ದಾಖಲೆ ಬರೆದಿದ್ದು, ಈ ಮೂಲಕ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟ್ ನ್ನು ರಾಜ್ಯದ ಸಮಸ್ತ ಜನರಿಗೆ ಅರ್ಪಿಸಿದ್ದಾರೆಂದು ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲ್ ರಾಜ್ಯ ಬಜೆಟ್ಟನ್ನು ಬಣ್ಣಿಸಿದ್ದಾರೆ.
ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ಅವರು, ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜೊತೆಗೆ, ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ್ದಾರೆ.
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಬಸವಣ್ಣ ಜನಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ವಚನ ಪ್ರಚಾರ ಕಾರ್ಯ ಸರ್ಕಾರದ ಬಸವಣ್ಣನ ವಿಚಾರಗಳೆಡೆಗೆ ಇರುವ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ 5 ಸಾವಿರ ಕೋಟಿ ಮೀಸಲಿಟ್ಟಿರುವುದು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕಾಂಗ್ರೆಸ್ ಸರಕಾರ ಬದ್ದತೆಯನ್ನ ತೋರಿಸುತ್ತದೆ.
ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಅವಧಿಗಿಂತ ದುಪ್ಪಟ್ಟು ಹಣ ನೀಡಿರುವ ನಮ್ಮ ಸರ್ಕಾರದ ಕ್ರಮ ನಿಜವಾಗಿಯೂ ಅಭಿನಂದನಾರ್ಹ.
ಒಟ್ಟಿನಲ್ಲಿ ಈ ಬಜೆಟ್ ಕನ್ನಡಿಗರಿಗೆ ಹೊಸ ಚೈತನ್ಯ ನೀಡಿದೆ. ಸಮಾಜದ ಎಲ್ಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದೆ ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.
2024-25 ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ ಬಜೆಟ್ ಗಿಂತ 46,636 ಕೋಟಿ ರೂ. ಹೆಚ್ಚಾಗಿದೆ. ಜುಲೈನಲ್ಲಿ ಮಂಡಿಸಿದ ಬಜೆಟ್ ಗಾತ್ರಕ್ಕಿಂತ ಬೆಳವಣಿಗೆಯಲ್ಲಿ ಶೇ. 13 ರಷ್ಟು ಬೆಳವಣಿಗೆಯಾಗಿದೆ. ಆರ್ಥಿಕವಾಗಿ ದಿವಾಳಿಯಾಗಿದೆ, ಗ್ಯಾರಂಟಿ ಜಾರಿಯಿಂದಾಗಿ ಮತ್ತು ಮಹಿಳೆಯರು , ಬಡವರಿಗೆ ಅವಮಾನವಾಗುವ ರೀತಿಯಲ್ಲಿ ‘ಬಿಟ್ಟಿ ಗ್ಯಾರಂಟಿ’ ಎಂಬ ಟೀಕೆ ಬಂದಿದೆ.
ಈ ವರ್ಷ 36,000 ಕೋಟಿ ರೂ. ಗ್ಯಾರಂಟಿಗಳಿಗೆ ಕೊಟ್ಟಿದ್ದರೂ ಕೂಡ ಅಭಿವೃದ್ಧಿಗೂ ಅನುದಾನವನ್ನು ಮೀಸಲಿರಿಸುವ ಮೂಲಕ ಸಿದ್ದರಾಮಯ್ಯ ತಾವು ಗ್ಯರಂಟಿ ಜೊತೆಗೇ ಅಭಿವೃದ್ಧಿಗೂ ಬದ್ಧರೆಂಬುದನ್ನು ತೋರಿಸಿಕೊಟ್ಟಿದ್ದಾರೆಂದು ಅಲ್ಲಂಪ್ರಭು ಬಣ್ಣಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…