ಕಲಬುರಗಿ: ಜೇವರ್ಗಿಯಲ್ಲಿ ತಾಲೂಕು ಆಡಳಿತದ ವಿಯಿಂದ ಶನಿವಾರ ಆಯೋಜಿಸಿದ ಸಮಾರಂಭದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ಅವರು ವಿಶ್ವ ಗುರುಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಅಜಯ್ ಸಿಂಗ್ ರಾಜ್ಯ ಸರ್ಕಾರ ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂಬುದಾಗಿ ಘೋಷಣೆ ಮಾಡಿರುವುದು ನಾಡೇ ಹೆಮ್ಮೆ ಪಡುವಂತಾಗಿದೆ ಎಂದರಲ್ಲದೆ, ನಾವೆಲ್ಲರೂ ಬಸವ ತತ್ವ ಮನೆ-ಮನೆ ಮುಟ್ಟಿಸೋಣ ಎಂದು ಕರೆ ನೀಡಿದ್ದಾರೆ.
ಜಗಜ್ಯೋತಿ ಬಸವಣ್ಣನವರು ಯಾವುದೇ ಜಾತಿ ಹಾಗೂ ವರ್ಗಕ್ಕೆ ಸಿಮೀತವಾಗಿಲ್ಲ. ಸಮಾನತೆಯ. ಕಾಯಕ, ತತ್ವ ಮೂಲಕ ಬಸವಣ್ಣನವರು ತೋರಿಸಿ ಕೊಟ್ಟಿರುವ ಸಿದ್ದಾಂತ ವ್ಯಾಪಕ ಪ್ರಚಾರಗೊಳಿಸಲು ನಾವೆಲ್ಲರು ಇಂದು ಕೆಲಸ ಮಾಡುವ ಜರೂರತ್ತಿದೆ, ಬಸವಣ್ಣನವರ ವಚನ ಸಾಹಿತ್ಯ ಅಧಾರದ ಮೇಲೆ ಸಂವಿಧಾನ ರೂಪುಗೊಂಡಿರುವುದನ್ನು ನಾವು ಕಾಣಬಹುದಾಗಿದೆ ಎಂದು ಡಾ. ಅಜಯ್ ಸಿಂಗ್ ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಮ್ಣ ಯಲಗೋಡ್, ತಾಲೂಕು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ್, ಜೇವರ್ಗಿ ತಾಪಂ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಮುಖಂಡರಾದ ರಾಜಶೇಖರ ಸಿರಿ, ಗುರುಲಿಂಗಪ್ಪಗೌಡ ಪಾಟೀಲ್ ಆಂದೋಲಾ, ಎಸ್ಕೆ ಬಿರಾದಾರ್, ನೀಲಕಂಠ ಆವಟಿ, ರವಿ ಕೋಳಕೂರ್, ಚನ್ನಮಲ್ಲಯ್ಯ ಹಿರೇಮಠ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…