- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದಲ್ಲಿ ಫೆ.23 ರಂದು ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಸಮಾರೋಪ ಸಮಾರಂಭದ ಸ್ಥಳವನ್ನು ಫೆ.16 ರಂದು ಸಾಯಾಂಕಾಲ 5 ಗಂಟೆ 30 ನಿಮಿಷಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಪರೀಶಿಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಯಾವುದೇ ಅಡೆತಡೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಆಶಪ್ಪ, ತಹಶೀಲ್ದಾರ್ ಸೈಯದ್ ಶಾಹವಲಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಹೇಬ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅನೇಕ ಮುಖಂಡರು ಇದ್ದರು.