ಕಲಬುರಗಿ: ನಿಲ್ಲಿಸಿದ ಸ್ಕೂಟಿಯ ಡಿಕ್ಕಿಯೊಳಗೆ ಇಟ್ಟಿದ್ದ 2 ಲಕ್ಷ ರೂ.ಗಳನ್ನು ಚಾಲಾಕಿ ಕಳ್ಳನೊಬ್ಬ ಸಮಯ ಸಾಧಿಸಿ ಡಿಕ್ಕಿ ತೆಗೆದು ಆ ಎರಡು ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋದ ಕೃತ್ಯ ನಗರದ ಸೂಪರ್ ಮಾರ್ಕೆಟ್‍ನಲ್ಲಿ ಸಂಭವಿಸಿದೆ. ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿರಾಣಿ ಅಂಗಡಿಯ ಮಾಲಿಕ ನಿತಿನ್ ಬಾವಗೆ ಅವರಿಗೆ ಸೇರಿದ ಹಣವೇ ಕಳ್ಳತನವಾಗಿದೆ. ನಿತಿನ್ ಬಾವಗೆ ಅವರು ಕಳೆದ ಶುಕ್ರವಾರ ಸಂಜೆ ವ್ಯಾಪಾರ ಮುಗಿಸಿಕೊಂಡು ತನ್ನ ಅಂಗಡಿ ಬಂದ್ ಮಾಡಿ ಮನೆಗೆ ಹೋಗುವಾಗ ಘಟನೆ ವರದಿಯಾಗಿದೆ.
ಎರಡು ಲಕ್ಷ ರೂ.ಗಳನ್ನು ಬಾವಗಿ ಅವರು ತಮ್ಮ ಜುಪಿಟರ್ ದ್ವಿಚಕ್ರವಾಹನದ ಡಿಕ್ಕಿಯಲ್ಲಿ ಇಟ್ಟಿದ್ದರು. ಎದುರಿನ ರಸ್ತೆಯಲ್ಲಿರುವ ತಮ್ಮ ಗೆಳೆಯರ ಬಳಿಗೆ ಹೋಗಿ ಬರುವಷ್ಟರಲ್ಲಿಯೇ ಕಳ್ಳ ಆ ಹಣವನ್ನು ದೋಚಿ ಪರಾರಿಯಾಗಿದ್ದ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜನದಟ್ಟಣೆಯ ಸ್ಥಳದಲ್ಲಿ, ಅದೂ ಒಂದು ಕಾರಿನ ಹಿಂದೆ ನಿಲ್ಲಿಸಿದ್ದ ಸ್ಕೂಟಿಯ ಡಿಕ್ಕಿಯನ್ನು ಅತ್ಯಂತ ಸುಲಭವಾಗಿ ತೆಗೆದು ಹಣ ದೋಚಿ ಪರಾರಿಯಾಗಿರುವ ವ್ಯಕ್ತಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಕುರಿತು ಚೌಕ್ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೋಲಿಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…