ವಾಡಿ; ಪಟ್ಟಣದ ಅಭಿವೃದ್ಧಿಗಾಗಿ ಹಾಗು ಆದಾನಿ ಒಡೆತನದ ಎಸಿಸಿ ಕಂಪನಿಯ ಪರಿಸರ ನಿಸ್ಕಾಳಜಿ ಬಗ್ಗೆ ಕಳೆದ ನವೆಂಬರ 20 ರಂದು ಪಟ್ಟಣದ ಶ್ರೀನಿವಾಸ ಚೌಕನಲ್ಲಿ ಬೃಹತ ಪ್ರತಿಭಟನೆ ಮೂಲಕ ನ್ಯಾಯಕ್ಕಾಗಿ ಹೋರಾಟ ಮಾಡಿದರು ಯಾವ ಅಧಿಕಾರಿಗಳು ಇನ್ನೂವರೆಗೂ ಸ್ಪಂದಿಸದೇ ಇರುವುದರಿಂದ ಬರುವ ಫೆಬ್ರವರಿ 20ನೇ ದಿನಾಂಕ ದಂದು ಮತ್ತೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದ್ದಾರೆ.
ಪಟ್ಟಣದಲ್ಲಿನ ಮುಖ್ಯ ರಸ್ತೆಯ ಕಳಪೆ ಕಾಮಗಾರಿ ಬಗ್ಗೆ, ಎಸಿಸಿ ಕಾರ್ಖಾನೆಯು ಪರಿಸರ ನಿಯಮ ಉಲ್ಲಂಘಿಸುತ್ತಿರುವ ಬಗ್ಗೆ,ಡಾ ಬಾಬ ಸಾಹೇಬ್ ಅಂಬೇಡ್ಕರ ಅವರ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಬಗ್ಗೆ, ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ,ಎಸಿಸಿ ಕಂಪನಿಯ ಆಡಳಿತ ಮಂಡಳಿಯವರು ಸ್ಥಳೀಯ ಬಡ ಕಾರ್ಮಿಕರಿಗೆ ಮಾಡಿರುವ ಮತ್ತು ಮಾಡುತ್ತಿರುವ ಅನ್ಯಾಯದ ಬಗ್ಗೆ, ಗ್ರಂಥಾಲಯ, ಆಟದ ಮೈದಾನ ಹಾಗೂ ಸಾರ್ವಜನಿಕ ಶೌಚಾಲಯ, ಉದ್ಯಾನವನ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ನವೆಂಬರ್ 20 ರಂದು ವಾಡಿ ಪಟ್ಟಣದ ಶ್ರೀನಿವಾಸ ಗುಡಿ ವೃತ್ತದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಶಾಂತಿಯುತ ಪ್ರತಿಭಟನೆ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ತಾಲೂಕಿನ ತಹಶಿಲ್ದಾರರಾದ ಷಾಷಾವಲಿ ಸರ್ ಅವರ ಮುಖಾಂತರ ಮನವಿಸಲ್ಲಿಸಿದ್ದೇವೆ.
ಒಂದು ವಾರದೊಳಗೆ ಇದನ್ನು ಪರಿಹರಿಸಿ ಇಲ್ಲದಿದ್ದರೆ ನಾವು ಮತ್ತೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದೇವು. ಒಂದು ವಾರದ ನಂತರ ಮತ್ತೆ ಅವರ ಗಮನಕ್ಕೆ ತಂದರೂ ಯಾವುದೇ ಬೇಡಿಕೆಗೆ ಬೆಲೆ ಕೂಡದೆ ಇರುವುದು ನಮ್ಮ ಹೋರಾಟಕ್ಕೆ , ಪ್ರತಿಭಟನೆಯ ಮನವಿ ಪತ್ರಕ್ಕೆ ಹಿಂಬರಹ ಸಹ ನೀಡಿದೇ ತಮ್ಮ ಕರ್ತವ್ಯಕ್ಕೆ ಚ್ಯುತಿ ತಂದಿದ್ದಾರೆ ಎಂದರು.
ಈ ರೀತಿ ನಮ್ಮ ನ್ಯಾಯಯುತ ಹೋರಾಟಕ್ಕೆ ಸ್ಪಂದಿಸದ ಸಂವಿಧಾನ ವಿರೋಧಿ ಮತ್ತು ಜನ ವಿರೋಧಿ ಅಧಿಕಾರಿಗಳ,ಗುತ್ತಿಗೆದಾರರ ಹಾಗೂ ಕಂಪನಿ ಆಡಳಿತ ಮಂಡಳಿಯವರ ವಿರುದ್ಧ ಹಾಗೂ ಪಟ್ಟಣದ ಮೂಲಭೂತ ಸೌಕರ್ಯಗಳಿಗಾಗಿ ಮತ್ತೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಬೆಂಬಲಿಸಿ ಹೋರಾಟಕ್ಕೆ ಬಲತುಂಬಬೇಕು ಎಂದು ಕೇಳಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…