ಕಲಬುರಗಿ: ಕರ್ನಾಟಕ ವಿಮೋಚನಾ ದಿನಾಚರಣೆ ಮಾಡುವಂತೆ ರಾಜ್ಯ ಸರಕಾರದ ಆದೇಶ ಹೊರಡಿಸಿದ್ದು ಇದು ಬಸವಣ್ಣನವರನ್ನು ಸೇರಿದಂತೆ ಇತರೆ ಶರಣರಿಗೆ ಮಾಡಿದ ಅಪಚಾರವಾಗಿದೆ ಎಂದು ಬಸವಾಭಿಮಾನಿಗಳು, ಸ್ವಾತಂತ್ರ್ಯ ಹೋರಾಟಗಾರರು, ನಾಗರಿಕರು ಹಾಗೂ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಈ ಕೂಡಲೇ ಸರಕಾರ ಸದರಿ ಆದೇಶವನ್ನು ಹಿಂಪಡೆದು ನಾಡಿನ ಬಸವಾಭಿಮಾನಿಗಳ ಹಾಗೂ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗದಂತೆ ಹೊಸ ಆದೇಶ ಹೊರಡಿಸಿ ಕಲ್ಯಾಣ ಕರ್ನಾಟಕದ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯ ಪಡಿಸಿರುವ ಶಾಸಕರು, ಸರಕಾರದ ಆದೇಶದಂತೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಎಂದರೆ ಶರಣರ ವಿಮೋಚನೆ ಎಂಬ ಭಾವನೆ ಬರುತ್ತಿದೆ ಇದು 12 ನೇ ಶತಮಾನದ ಮಹಾಪುರುಷ ಬಸವಣ್ಣನವರು ಸೇರಿರಂತೆ ಇತರ ಶರಣರಿಗೆ ಅವಮಾನ ಮಾಡಿದಂತೆ ಹಾಗಾಗಿ ಕೂಡಲೇ ಆದೇಶ ಹಿಂಪಡೆದು ಹೊಸ ಆದೇಶ ಮಾಡುವಂತೆ ಅವರು ಒತ್ತಾಯಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…