ಬಿಸಿ ಬಿಸಿ ಸುದ್ದಿ

ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ವಿಧಾನ ಸೌಧದ ಮುಂಭಾಗದಲ್ಲಿ ಆಯುμï ಇಲಾಖೆ ಮತ್ತು ಯೋಗ ಗಂಗೋತ್ರಿ ಟ್ರಸ್ಟ್ ಸಹಯೋಗದೊಂದಿಗೆ, ರಥಸಪ್ತಮಿ ಅಂಗವಾಗಿ ಆಯೋಜಿಸಲಾಗಿದ್ದ “ಯೋಗ ಮತ್ತು 108 ಸೂರ್ಯ ನಮಸ್ಕಾರ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೂರ್ಯನಮಸ್ಕಾರ ಮಾಡುವುದರಿಂದ ಉತ್ತಮ ಶಾರೀರಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಸಮೃದ್ಧಿಸಿಕೊಳ್ಳಬಹುದು ಎಂದು ಹೇಳಿದರು.

ಸೂರ್ಯ ನಮಸ್ಕಾರದ ಅಭ್ಯಾಸದಿಂದ ಶರೀರ ಮತ್ತು ಮನಸ್ಸಿಗೆ ನವ ಚೈತನ್ಯ ಸಿಗುತ್ತದೆ. ಸೂರ್ಯ ನಮಸ್ಕಾರ, ಇನ್ನಿತರೆ ಆಸನಗಳು ಪ್ರಾಣಾಯಾಮ ಹಾಗೂ ಧ್ಯಾನ ಇನ್ನಿತರೆ ಅಭ್ಯಾಸಗಳಿಂದ ದೇಹ, ಮನಸ್ಸು ಚುರುಕುಗೊಳ್ಳುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆಧುನಿಕ ಜಗತ್ತಿನ ಬದಲಾದ ಜೀವನ ಶೈಲಿಯಿಂದ ಉಂಟಾಗುವ ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಸೂರ್ಯ ನಮಸ್ಕಾರದಂತಹ ಯೋಗಾಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ದಿನದ ಪ್ರಮುಖ ಅಗತ್ಯಗಳಲ್ಲೊಂದಾಗಿರುತ್ತದೆ ಎಂದು ಸಲಹೆ ನೀಡಿದರು.

ಭಾರತೀಯ ಸಂಸ್ಕøತಿಯಲ್ಲಿ ಉತ್ತಮ ಆರೋಗ್ಯ, ಸುಖ-ಸಮೃದ್ಧಿಗಾಗಿ ನಿತ್ಯವು ಸೂರ್ಯನಿಗೆ ಪೂಜೆ ಸಲ್ಲಿಸಲಾಗುತ್ತದೆ. ಸೂರ್ಯನಿಲ್ಲದೆ ದಿನಗಳನ್ನು ಊಹಿಸಲು ಕೂಡ ಅಸಾಧ್ಯ. ಸೂರ್ಯನ ಕಿರಣಗಳು ಮನುಷ್ಯನ ಆರೋಗ್ಯಕ್ಕೆ ಎಷ್ಟು ಪ್ರಮುಖವಾದದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದರು.

ಜನರ ಉತ್ತಮ ಆರೋಗ್ಯಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಉಚಿತ ಯೋಗ ತರಬೇತಿಯ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರೋಗ್ಯವಂತ ಜೀವನ ನಡೆಸಬೇಕೆಂದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಅವರು ಮಾತನಾಡಿ, ಮನಸ್ಸು ಮತ್ತು ಆರೋಗ್ಯ ಚೆನ್ನಾಗಿರಬೇಕೆಂದರೆ ಯೋಗ ಅಭ್ಯಾಸ ಅತ್ಯವಶ್ಯಕವಾಗಿದೆ. ನಾನು ಸಹ ಕಳೆದ ವರ್ಷಗಳಿಂದ ಯೋಗಭ್ಯಾಸ ಮಾಡುತ್ತಿರುವುದರಿಂದ ಬಹಳಷ್ಟು ಬದಲಾವಣೆಯನ್ನು ಹೊಂದಿದ್ದೇನೆ. ಸೂರ್ಯ ನಮಸ್ಕಾರ ಮಾಡುವುದು ಸ್ವಲ್ಪ ಕಷ್ಟವಾದರೂ, ಇದರಿಂದ ಸದೃಢವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಎಲ್ಲರೂ ಯೋಗಭ್ಯಾಸ ಮತ್ತು ಸೂರ್ಯ ನಮಸ್ಕಾರ ಮಾಡುವುದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತರಾದ ಶ್ರೀನಿವಾಸಲು, ಯೋಗ ಗಂಗೋತ್ರಿ ಸಂಸ್ಥೆಯವರಾದ ಡಾ. ಆರಾಧ್ಯ ಗುರುರಾಜ, ಆಯುಷ್ ಇಲಾಖೆಯ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago