ಸುರಪುರ: ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಗೆ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ಹೋರಾಟಗಾರ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ್ ಮಾಲಗತ್ತಿ ಇವರನ್ನು ನೇಮಕಗೊಳಿಸಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ವಿ.ಹನುಮಂತ್ರಾಯ ತಿಳಿಸಿದರು.
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ರಾಜ್ಯದಲ್ಲಿನ ಅನೇಕ ಭ್ರಷ್ಟಾಚಾರ ಪ್ರಕರಣಗಳು ಇಂದು ಮಾಹಿತಿ ಹಕ್ಕಿನಿಂದ ಹೊರಬರುತ್ತಿದ್ದು,ಇದರಿಂದ ಅನೇಕ ಭ್ರಷ್ಟ ಅಧಿಕಾರಿಗಳು ಶಿಕ್ಷೆಯನ್ನು ಅನುಭವಿಸಿದ್ದಾರೆ.ಆದ್ದರಿಂದ ಇಂದು ಮಾಹಿತಿ ಹಕ್ಕು ಎನ್ನುವುದು ಭ್ರಷ್ಟರ ಪಾಲಿನ ಅಸ್ತ್ರವಾಗಿದ್ದು,ಇಂದು ನಮ್ಮ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಯಾದಗಿರಿ ಜಿಲ್ಲಾ ಘಟಕಕ್ಕೂ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸುವ ಮೂಲಕ ಜಿಲ್ಲೆಯಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗೆ ನಮ್ಮ ವೇದಿಕೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷ ದೇವಿಂದ್ರಪ್ಪಗೌಡ ಮಾತನಾಡಿ,ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ,ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಿನಲ್ಲಿ ನಮ್ಮ ವೇದಿಕೆ ಕಾರ್ಯನಿರ್ವಹಿಸಲಿದ್ದು ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸುವ ಮೂಲಕ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಜಿಲ್ಲೆಯಲ್ಲಿ ಬಲಪಡಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಶರಣಪ್ಪ ಅನ್ಸೂರ ಲಕ್ಷ್ಮೀಪುರ ಹಾಗೂ ಸಂಘಟನಾ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಆಶಿನಾಳ ಅವರನ್ನು ನೇಮಕಗೊಳಿಸಲಾಯಿತು.
ಸಭೆಯಲ್ಲಿ ಸದಸ್ಯರಾದ ಮಹೇಶ ಮಂಡಗಳ್ಳಿ,ವಿರುಪಾಕ್ಷಿ ಶೆಟ್ಟಿ,ಶಿವರಾಜ ವಗ್ಗಾರ್,ಮುರಳಿ ರಂಗಂಪೇಟ,ಶರಣು ಕರಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…