ಸುರಪುರ: ವಿದ್ಯಾರ್ಥಿಗಳು ಸತತ ಅಧ್ಯಾಯನ ನಿರಂತರ ಪರಿಶ್ರಮದಿಂದ ಮಾತ್ರ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸುರಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಬಸಪ್ಪ ಯಾಳವಾರ ಹೇಳಿದರು.
ನಗರದ ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಿ.ಯು.ಸಿ ದ್ವಿತಿಯ ವರ್ಷದ ಮತ್ತು ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಉತ್ತಮ ಗುರಿ ಉದ್ದೆಶ ಹೊಂದಿರುವುದರ ಜೊತೆಗೆ ಅತ್ಯಂತ ಪರಿಶ್ರಮದ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶರಣು ನಾಯಕ ಮಾತನಾಡಿ, ವಿಧ್ಯಾರ್ಥಿಗಳು ಶಿಕ್ಷಣದೊಂದಿಗೆ ಸಂಸ್ಕಾರ ಕಲಿಯುವುದು ಅತ್ಯಂತ ಅಗತ್ಯವಾಗಿದೆ, ವಿದ್ಯಾರ್ಥಿಗಳು ಸತತ ಅಧ್ಯಾಯನ, ನಿರಂತರ ಪರಿಶ್ರಮ ಪ್ರತಿದಿನದ ಚಟುವಟಿಕೆಯಾಗಬೇಕು ಎಂದರು.
ಮಾಲಗತ್ತಿಯ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಅಬ್ದುಲ್ ಪಟೇಲ ಮಾತನಾಡಿ, ವಿದ್ಯಾರ್ಥಿಗಳು ಅತಿ ಹೆಚ್ಚು ಗ್ರಾಮೀಣ ಪ್ರದೇಶದವರಾಗಿದ್ದು ನಿವು ಉತ್ತಮವಾಗಿ ಅಭ್ಯಾಸಮಾಡಿ ಗುರಿಮುಟ್ಟುವುದು ಅತ್ಯಂತ ಅಗತ್ಯವಾಗಿದೆ ಆ ದಿಶೆಯಲ್ಲಿ ನಿಮ್ಮ ಪರಿಶ್ರಮ ನಿರಂತರವಾಗಿರಲಿ ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಉಪಪ್ರಾಚಾರ್ಯ ಬಲಭೀಮ ಪಾಟೀಲ, ಹಿರಿಯ ಮುಖಂಡ ಶಿವಶರಣಪ್ಪ ಹೆಡಿಗಿನಾಳ ವೇದಿಕೆಮೇಲಿದ್ದರು. ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಸಮಾರಂಭ ಜರಗಿದವು. ಕುಮಾರಿ ಮೇಘಾ ಪ್ರಾರ್ಥಿಸಿದರು, ಉಪನ್ಯಾಸಕಿ ಶೃತಿ ಹಿರೇಮಠ ನಿರೂಪಿಸಿದರು, ಮಾನಯ್ಯ ರುಕ್ಮಾಪೂರ ಸ್ವಾಗತಿಸಿದರು, ವೆಂಕಟೇಶ ದೇವಿಕೇರಾ ವಂದಿಸಿದರು.