ಸುರಪುರ: ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತಿ ಯಾದಗಿರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ಇವರುಗಳ ವತಿಯಿಂದ ತಾಲೂಕಿನ ತಿಂಥಣಿ ಹಾಗೂ ದೇವಾಪುರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.
ರವಿವಾರ ಬೆಳಿಗ್ಗೆ 11 ಗಂಟೆಗೆ ತಿಂಥಣಿ ಗ್ರಾಮಕ್ಕೆ ಜಾಥಾ ಆಗಮಿಸುತ್ತಿದ್ದಂತೆ,ಶಾಲಾ,ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳಿಂದ ಮೆರವಣಿಗೆ ನಡೆಸಲಾಯಿತು.ನಂತರ ಸಂವಿಧಾನದ ಪೀಠಿಕೆ ಬೋಧಿಸುವ ಮೂಲಕ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಂತರ ತಿಂಥಣಿಯಿಂದ ದೇವಾಪುರ ಜಾಥಾ ಆಗಮಿಸುತ್ತಿದ್ದಂತೆ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು.ಜಾಥಾದ ರಥದ ಮೆರವಣಿಗೆಯನ್ನು ನಡೆಸಲಾಯಿತು,ಜಾಥಾದಲ್ಲಿ ಶಾಲಾ,ಕಾಲೇಜಿನ ವಿದ್ಯಾರ್ಥಿಗಳ ಕೋಲಾಟ,ಲೇಜಿಮ್ ಹಾಗೂ ಡೊಳ್ಳಿನ ಕಲಾ ತಂಡದ ಕುಣಿತ ನೋಡುಗರ ಗಮನಸೆಳೆಯಿತು.ನಂತರ ಗ್ರಾಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳಾದ ಹನಮಂತ,ರಬ್ಬಾನಿ ಹಾಗೂ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳಾದ ಭೀಮರಾಯ ಮಕಾಶಿ,ಪಿ.ಡಿ.ಹಳ್ಳಿ,ಶಿಕ್ಷಣ ಇಲಾಖೆಯ ಇ.ಸಿ.ಓ ಶಿವಪುತ್ರ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ ಗಂಗಾಧರ ನಾಯಕ ತಿಂಥಣಿ,ಮಲ್ಲಿಕಾರ್ಜುನ ಸಾಹುಕಾರ, ಶಿವಪುತ್ರ ಜವಳಿ,ಶಿವಲಿಂಗ ಹಸನಾಪುರ,ಮರಿಲಿಂಗಪ್ಪ ಗುಡಿಮನಿ,ತಿಪ್ಪಣ್ಣ ಶೆಳ್ಳಗಿ,ಎಮ್.ಪಟೇಲ್,ಖಾಜಾ ಅಜ್ಮೀರ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…