ಕಮಲಾಪೂರ: ಜಯಂತ್ಯೋತ್ಸವಗಳು ಎಲ್ಲ ವರ್ಗದ ಜನರಿಗೆ ಸೀಮಿತವಾಗಿರಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.
ತಾಲೂಕಿನ ಮಹಾಗಾಂವ ಕ್ರಾಸ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ, ಸಭೆ ಸಮಾರಂಭಗಳನ್ನು ಪ್ರತಿಯೊಬ್ಬರೂ ಆಚರಣೆ ಮಾಡಬೇಕು. ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿಗಳಾಗಿದ್ದು, ಅವರ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಗೊಳಿಸಿ ರಕ್ಷಿಸುವಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ರಾಷ್ಟ್ರನಾಯಕರಾಗಿ ಧರ್ಮ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ತ್ಯಾಗ, ಬಲಿದಾನದ ಪರಿಣಾಮವಾಗಿ ಇಂದು ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು.
ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅನಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಗೌರವ ಸಲ್ಲಿಸಿದಂತಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗಜಾನಂದ ಜಾಧವ,ದಿಲೀಪ ಚವ್ಹಾಣ, ಸಂದೀಪ ಬಿರಾದಾರ, ಕಾಶೀನಾಥ ಸಾವಂತ, ಸಂಜುಕುಮಾರ ಚವ್ಹಾಣ,ಆನಂದ ಚವ್ಹಾಣ,ತುಳಸಿರಾಮ ಜಾಧವ,ಗೋವಿಂದ ಬೋಸ್ಲೆ,ಶ್ರೀಮಂತರಾವ ಜಗದಾಳೆ, ವಿಶ್ವನಾಥ ಜಗತಾಪೆ,ಶಿವು ಚಕಳಾಪುರ,ಲಕ್ಷ್ಮಣ ಸೂರ್ಯವಂಶಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…