ಬೆಂಗಳೂರು; ವಿಧಾನಸೌಧದ ಆವರಣದಲ್ಲಿ ಇತ್ತೀಚೆಗೆ ನಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿಯಾಗಿದೆ. ಜನಸ್ಪಂದನ ಕಾರ್ಯಕ್ರಮ ನಿರಂತರವಾಗಿ ಮುಂದುವರಿಸಬೇಕು ಎಂಬುದು ಮಾನ್ಯ ಮುಖ್ಯಮಂತ್ರಿಗಳ ಆಕಾಂಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಜನಸ್ಪಂದನವನ್ನು ವಿಭಾಗಮಟ್ಟಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ತಿಳಿಸಿದರು.
ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಜನಸ್ಪಂದನ ಕಾರ್ಯಕ್ರಮದ ಕುರಿತು ಪರಾಮರ್ಶೆ ಹಾಗೂ ಮೌಲ್ಯಮಾಪನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಮುಖ್ಯಮಂತ್ರಿಗಳ ಬಳಿ ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಮಾನ್ಯ ಮುಖ್ಯಮಂತ್ರಿಗಳು ಸಹ ಸಂಯಮದಿಂದ ಸಮಸ್ಯೆಗಳನ್ನು ಅಹವಾಲಿಸಿ ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದ್ದಾರೆ. ಜನಸ್ಪಂದನದಲ್ಲಿ ಬಂದಿರುವ ಅರ್ಜಿಗಳನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿಕೊಡಲಾಗಿದ್ದು,ಅವುಗಳಿಗೆ ಹಿಂಬರಹ ಕೊಟ್ಟರೇ ಆಗುವುದಿಲ್ಲ. ನಾಡಿನ ಪ್ರಜೆಯೊಬ್ಬ ಮಾನ್ಯ ಮುಖ್ಯಮಂತ್ರಿಗಳವರೆಗೆ ಬಂದಾಗ ಸಮಸ್ಯೆ ಬಹುತೇಕ ಸಮಸ್ಯೆ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕೆಂದು ಅಪೇಕ್ಷಿಸಿದ್ದಾರೆ ಎಂದರು.
ಬರೀ ವಿಲೇವಾರಿ ಮಾಡಿ ಕೈ ತೊಳೆದುಕೊಳ್ಳದೇ ಕಿuಚಿಟiಣಥಿ ಜisಠಿosಚಿಟs ಗೆ ಹೆಚ್ಚಿನ ಒತ್ತು ಕೊಡಬೇಕು. ಬಂದಿರುವ 14685 ಅರ್ಜಿಗಳಲ್ಲಿ ಈಗಾಗಲೇ 4321ವಿಲೇವಾರಿ ಮಾಡಲಾಗಿದ್ದು;ಉಳಿದವುಗಳನ್ನು ಆದ್ಯತೆ ಮೇರೆಗೆ ವಿಲೇವಾರಿಗೆ ಕ್ರಮವಹಿಸಬೇಕು. ಇಡೀ ದೇಶಕ್ಕೆ ಈ ಜನಸ್ಪಂದನ ಕಾರ್ಯಕ್ರಮ ಮಾದರಿಯಾಗಬೇಕು.ಇನ್ನಷ್ಟು ಹೆಚ್ಚಿನ ಗುಣಮಟ್ಟ ತರಬೇಕು ಎಂದು ಅವರು ಹೇಳಿದರು.
ಕಲಬುರಗಿಯಲ್ಲಿ ಮುಂದಿನ ಜನಸ್ಪಂದನ ನಡೆಸಲು ನಿರ್ಧರಿಸಲಾಗಿದೆ. ಜನಸ್ಪಂದನದಲ್ಲಿ ಬಂದಿರುವ ದೂರುಗಳಲ್ಲಿ ಅತಿ ಹೆಚ್ಚು ಕಂದಾಯ ಇಲಾಖೆಗೆ ಸೇರಿದವುಗಳಾಗಿವೆ. ಜಿಲ್ಲಾವಾರು ಬೆಂಗಳೂರು ನಗರ,ತುಮಕೂರು, ಮೈಸೂರು ಜಿಲ್ಲೆಗಳಿಂದ ಹೆಚ್ಚು ದೂರು ಸ್ವಿಕೃತವಾಗಿವೆ ಎಂದು ತಿಳಿಸಿದರು.
ಇತ್ತೀಚಿಗೆ ನಡೆದ ಜನಸ್ಪಂದನದ ಯಶಸ್ವಿಯ ಶ್ರೇಯಸ್ಸು ಎಲ್ಲರಿಗೂ ಸಲ್ಲುತ್ತದೆ. ವಿಧಾನಸೌಧದ ಆವರಣದಲ್ಲಿ ನಡೆದ ಜನಸ್ಪಂದನದ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಿಕೊಂಡು ಮುಂದಿನ ಜನಸ್ಪಂದನ ನಡೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ ಎಂದರು.
ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳು ಆಗಿರುವ ಡಾ.ಕೆ.ವಿ.ತ್ರೀಲೋಕಚಂದ್ರ, ಇ-ಆಡಳಿತ ಇಲಾಖೆಯ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್, ಸೇರಿದಂತೆ ವಿವಿಧ ಇಲಾಖೆಗಳ ಆಯುಕ್ತರು,ಹಿರಿಯ ಅಧಿಕಾರಿಗಳು ಇದ್ದರು.