ಸುರಪುರ: ತಾಲೂಕಿನ ಯಕ್ತಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುತ್ತಿ ಬಸವೇಶ್ವರ ದೇವಸ್ಥಾನದ ಹೆಸರಲ್ಲಿ ಭಕ್ತರಿಂದ ದೇಣಿಗೆ ಸಂಗ್ರಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಭಾಗವಹಿಸಿ ಮಾತನಾಡಿ,ಯಕ್ತಾಪುರ ಗುತ್ತಿ ಬಸವೇಶ್ವರ ದೇವಸ್ಥಾನದ ಮುಜರಾಯಿ ಇಲಾಖೆ ಅಡಿಯಲ್ಲಿನ ದೇವಸ್ಥಾನವಿದ್ದು ಕೆಲವರು ಆಡಳಿತ ಮಂಡಳಿ ರಚನೆ ಮಾಡಿಕೊಂಡು,ದೇವಸ್ಥಾನದ ಮೂಲಿ ಹಾಗೂ ಗೋಪುರ ನಿರ್ಮಾಣದ ಹೆಸರಲ್ಲಿ ಭಕ್ತರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಸಂಗ್ರಹ ಮಾಡಿ ವಂಚಿಸಿದ್ದಾರೆ.ಕೂಡಲೇ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,ಆಡಳಿತ ಮಂಡಳಿ ಜಂಟಿ ಖಾತೆಯಲ್ಲಿರುವ ಲಕ್ಷಾಂತರ ರೂಪಾಯಿ ದೇವಸ್ಥಾನದ ಖಾತೆಗೆ ತೆಗೆದುಕೊಳ್ಳಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸಿಲ್ದಾರ್ ಕಚೇರಿ ಸಿರಸ್ತೆದಾರ ಪ್ರವೀಣಕುಮಾರ ಸಜ್ಜನ್ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮಾನು ಗುರಿಕಾರ,ರವಿಚಂದ್ರ ಬೊಮ್ಮನಹಳ್ಳಿ,ಮಲ್ಲಿಕಾರ್ಜುನ ಕುರಕುಂದಿ,ರಾಮಣ್ಣ ಶೆಳ್ಳಗಿ,ಸಂಘದ ತಾಲೂಕು ಸಂಚಾಲಕ ಬಸವರಾಜ ದೊಡ್ಮನಿ,ಮೂರ್ತಿ ಬೊಮ್ಮನಹಳ್ಳಿ,ನಿಂಗಪ್ಪ ಕಟಗಿ ಶಹಾಪುರ,ದೇವಪ್ಪ ಗುಡ್ಡೇರ,ಖಾಜಾ ಹುಸೇನ ಗುಡಗುಂಟಿ,ಮಹೇಶ ಯಾದಗಿರಿ, ಚಂದಪ್ಪ ತಳಕ,ಬಸವರಾಜ ಗೋನಾಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…