ಕಲಬುರಗಿ; ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಶರಣಪ್ಪ ಎಸ್ ದೇವರಮನಿ (90) ಸೋಮವಾರ ರಾತ್ರಿ ಕಲಬುರಗಿ ನಗರದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ದೇವರಮನಿ ಅವರು 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಆತ್ಮೀಯ ವಿಶ್ವಾಸ ಹೊಂದಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಅವರು ಕೆಲವೇ ವರ್ಷಗಳ ಹಿಂದೆ ಸಂಘದ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದು ಪ್ರಸ್ತುತ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರಿಗೆ ಪ್ರಭಾರವನ್ನು ಹಸ್ತಾಂತರಿಸಿದ್ದರು.
ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದವರಾದ ದೇವರಮನಿ ಅವರು ತಮ್ಮ ಪತ್ನಿ ಶಶಿಕಲಾ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಂಗಳವಾರ ದೇವರಮನಿ ಅವರ ಪಾರ್ಥಿವ ಶರೀರವನ್ನು ನೆಲೋಗಿಗೆ ಕೊಂಡೊಯ್ದು ಅವರ ಬಂಧು ಮಿತ್ರರ ಸಮ್ಮುಖದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಜರುಗಲಿದೆ.
ಪೂಜ್ಯ ಡಾ. ಅಪ್ಪಾಜಿ, ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ದೇವರಮನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದಲ್ಲಿ ದೇವರಮನಿ ಅವರ ನಿಧನಕ್ಕೆ ಸಂತಾಪ ಸೂಚಿಸುವ ಸಭೆಯನ್ನು ಆಯೋಜಿಸಲಾಗಿತ್ತು. ಕುಲಸಚಿವ ಡಾ. ಅನಿಲಕುಮಾರ ಬಿಡವೆ ಅವರು ದೇವರಮನಿ ಅವರು ಸಂಘಕ್ಕೆ, ಎಲ್ಲಾ ಇತರ ಶಿಕ್ಷಣ ಸಂಸ್ಥೆಗಳಿಗೆ ಮತ್ತು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿದರು.
ಸಂತಾಪ ಸೂಚಕ ಸಭೆಯಲ್ಲಿ ವಿವಿಯ ಸಮಕುಲಪತಿ ಪೆÇ್ರ. ವಿ.ಡಿ.ಮೈತ್ರಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…