ಕಲಬುರಗಿ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಗುಲಬರ್ಗ ವಿವಿ ಕುಲಪತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

0
331

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ. 26 ಮತ್ತು 27 ರಂದು ನಗರದ ಡಾ. ಎಸ್. ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಕಲಬುರಗಿ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಗುಲಬರ್ಗ ವಿಶ್ವವಿದ್ಯಾಲಯ ಕುಲಪತಿ ಪ್ರೊ. ದಯಾನಂದ ಅಗಸರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ಭಾಷೆ ನಮ್ಮ ಕನ್ನಡವಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ, ಕಲೆ, ಪರಂಪರೆ ಕನ್ನಡ ಭಾಷಾಭಿಮಾನಕ್ಕೆ ಸಮೃದ್ಧ ನೆಲೆಯಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಆಯೋಜಿಸಿರುವ ಸಾಹಿತ್ಯ ಸಮ್ಮೇಳನ ಜನರ ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೇ ನಡೆಯಲಿ ಎಂದು ಸಲಹೆ ನೀಡಿದರು.

Contact Your\'s Advertisement; 9902492681

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನಮ್ಮ ಕನ್ನಡದ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮನಾದ್ದರಿಂದ ಕನ್ನಡ ಭಾಷೆ ಅನ್ನ ಕೊಡುವ ಭಾಷೆಯಾಗಬೇಕಿದೆ. ಕನ್ನಡದ ಉಗಮ ಸ್ಥಾನ ಎನಿಸಿಕೊಂಡಿರುವ ಕಲಬುರಗಿ ಜಿಲ್ಲೆಯಲ್ಲಿನ ಸಾಹಿತ್ಯ ಕ್ಷೇತ್ರದ ಪ್ರತಿಭೆಗಳು ವಿಶ್ವ ಮಟ್ಟದಲ್ಲಿ ದಾಖಲೆ ಮಾಡಿದ ಅನೇಕ ಉಧಾಹರಣೆಗಳಿವೆ. ಈ ಸಾಹಿತ್ಯ ಸಮ್ಮೇಳನ ಹೊಸ ಪೀಳಿಗೆಯಲ್ಲಿ ಉತ್ಸಾಹ ಮೂಡಿಸುತ್ತಿದೆ ಎಂದರು.

ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಚಿತ್ರ ಕಲಾವಿದ ಡಾ. ರೆಹಮಾನ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಇಂದಿನ ಮಕ್ಕಳಲ್ಲಿ ಸ್ಪರ್ಧಾತ್ಮಕ ಗುಣ ಬೆಳೆಸುವುದು ಹಾಗೂ ರಂಗೋಲಿ ಕಲೆಯನ್ನು ಉಳಿಸುವ ಉದ್ದೇಶದಿಂದ ಫೆ. 22 ರ ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದಲ್ಲಿ ಮಕ್ಕಳಿಗಾಗಿ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಸಕ್ತರು ಶಿಲ್ಪಾ ಜೋಶಿ-8310 5 84131 ಡಾ. ರೆಹಮಾನ್ ಪಟೇಲ್ – 97396 17810 ಕ್ಕೆ ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here