ಬಿಸಿ ಬಿಸಿ ಸುದ್ದಿ

9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ; ಮುಖ್ಯಮಂತ್ರಿ

ಬೆಂಗಳೂರು; ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸಭೆಯ ಕಲಾಪದ ವೇಳೆ ಮಾನ್ಯ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಮಾಡುತ್ತಾ ವಿವರಣೆ ನೀಡಿದರು.

ಪತ್ರಿಕೆಗಳ ಶ್ಲಾಘನೆಗಳನ್ನು ಪ್ರಸ್ತಾಪಿಸಿದ ಸಿಎಂ; ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿμï ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿಪಕ್ಷ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ.

ಬಂಡವಾಳ ಹೂಡಿಕೆಗೂ, ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರ ಕಡಿಮೆ ಅವಧಿಯಲ್ಲೇ ಇμÉ್ಟೂಂದು ಪ್ರಮಾಣದ ಹೂಡಿಕೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಆಗಿದೆ ಎಂದು ವಿವರಿಸಿದರು.

ಪ್ರತಿ ಪಕ್ಷದವರ ಸುಳ್ಳು ಆರೋಪಗಳಿಗೆ ಈಗಾಗಲೇ ಗೃಹ ಸಚಿವ ಪರಮೇಶ್ವರ್ ಅವರು ಸ್ಪಷ್ಟ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ, ಅಭಿವೃದ್ಧಿ ಕಾರ್ಯಗಳನ್ನು ಮರೆತು ಸುಳ್ಳುಗಳ ಆಸರೆಗೆ ಹೋದ ಕಾರಣ ಹಿಂದಿನ ಸರ್ಕಾರವನ್ನು ರಾಜ್ಯದ ಜನತೆ ತಿರಸ್ಕರಿಸಿದರು. ಇದು ಅವರ ಕಾರ್ಯಗಳಿಗೆ ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago