ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕೂಡಿ ಗ್ರಾಮದಲ್ಲಿ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂದೀಪ್ ಭೀಮನಗೌಡ ಪಾಟೀಲ್ ಅವರು ಉದ್ಘಾಟಿಸಿದರು.
ನಂತರ ಗ್ರಾಮಕ್ಕೆ ಭಾರತ ಸಂವಿಧಾನ ಜಾಗೃತಿ ಜಾಥಾ ಅದ್ದೂರಿಯಾಗಿ ಸ್ವಾಗತ ಮಾಡಿದರು. ಗ್ರಾಮದಲ್ಲಿ ಮೆರವಣಿಗೆ ಮೂಲಕ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಂವಿಧಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಕೂಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಾಗಮ್ಮ ವಿನೋದ್ ಪಾಟೀಲ್, ಪಂಚಾಯಿತ ಪಿಡಿಒ ಅರವಿಂದ್ ಚವ್ಹಾಣ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.