ಬಿಸಿ ಬಿಸಿ ಸುದ್ದಿ

ಕಲಬುರಗಿ – ಮಂಗಳೂರಿಗೆ ಶೀಘ್ರ ವಿಮಾನ ಸೇವೆ; ಸಂಸದ ಡಾ. ಜಾಧವ್

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ತಿಳಿಸಿದರು.

ನವದೆಹಲಿಯಲ್ಲಿ ಫೆಬ್ರವರಿ 20ರಂದು ಮಂಗಳವಾರ ಲೋಕಸಭಾ ಸದಸ್ಯರ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ಸ್ಪಂದನೆ ನೀಡಿ ಈ ವಿಷಯ ತಿಳಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಕಲಬುರ್ಗಿ-ಬೆಂಗಳೂರು – ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಪ್ರಮುಖ ವಿಮಾನ ಯಾನ ಸಂಸ್ಥೆ ಇಂಡಿಗೋ ಸೇರಿದಂತೆ ಖಾಸಗಿ ವಿಮಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ನಾಗರಿಕ ವಿಮಾನಯಾನ ಖಾತೆಯ ಅಧಿಕಾರಿಗಳೊಂದಿಗೆ ಚರ್ಚೆ ಪ್ರಗತಿಯಲ್ಲಿದೆ.

ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆ ಅಡಿಯಲ್ಲಿ ಪ್ರಾರಂಭಿಸಿದ ವಿಮಾನ ನಿಲ್ದಾಣಗಳಿಗೆ ಹೆಚ್ಚು ಹೆಚ್ಚು ವಿಮಾನಗಳ ಸಂಪರ್ಕ ಸೇವೆ ಹೊಂದಿ ಆ ಭಾಗದ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ನಾಗರಿಕ ವಿಮಾನ ಯಾನ ಖಾತೆಯ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಆಸಕ್ತರಾಗಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಜಾಧವ್ ತಿಳಿಸಿದರು.

ತಮ್ಮ 5 ವರ್ಷಗಳ ಅವಧಿಯಲ್ಲಿ ವಿಮಾನ ನಿಲ್ದಾಣದ ಪ್ರಗತಿಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ರಾತ್ರಿ ವಿಮಾನಗಳು ಇಳಿಯುವ ಸೌಲಭ್ಯ ಉತ್ತಮ ಹೆಜ್ಜೆ, ಬೆಂಗಳೂರು – ಕಲಬುರಗಿ ಮಧ್ಯೆ ವಿಮಾನ ಸೇವೆ ಈಗಾಗಲೇ ಆಗಿದ್ದು ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ನಗರಗಳಿಗೆ ಸಂಪರ್ಕ ಕಲ್ಪಿಸುವ ಇಚ್ಛೆ ಹೊಂದಲಾಗಿದೆ ಎಂದು ಹೇಳಿದರು.

ಉಡಾನ್ ಯೋಜನೆಯಡಿ ಪ್ರಧಾನಮಂತ್ರಿಯವರು ಸಣ್ಣ ಸಣ್ಣ ನಗರಗಳಿಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯಿಂದ ಸಾಮಾನ್ಯ ಜನರು ಕೂಡ ವಿಮಾನ ಸಂಚಾರದ ಲಾಭವನ್ನು ಪಡೆಯುತ್ತಿರುವುದು ಸಂತಸದ ಸಂಗತಿ. ದೇಶದ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಸಂಚರಿಸುವ ಕನಸು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ತಿಳಿಸಿದರು.

ಫೆಬ್ರವರಿ 22ರಂದು ರಾತ್ರಿ 8 ಗಂಟೆಗೆ ಮೊದಲ ವಿಮಾನ ಬೆಂಗಳೂರಿನಿಂದ ಕಲ್ಬುರ್ಗಿಯಲ್ಲಿ ಬಂದು ಇಳಿಯುವ ಸಂದರ್ಭದಲ್ಲಿ ತಾನು ಖುದ್ದಾಗಿ ಹಾಜರಿದ್ದು ಶುಭಕೋರುವವನಿದ್ದೇನೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

52 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago