ಯಡ್ರಾಮಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

0
29

ಯಡ್ರಾಮಿ: ಭಾರತದ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂವಿಧಾನದ ಮಹತ್ವ ಮತ್ತು ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬುಧವಾರ ಯಾಳವಾರ ಇಜೇರಿ ಹಾಗೂ ಸಾಥಖೇಡ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು, ನಾಗರಿಕರು ಸಂವಿಧಾನ ಪೀಠಿಕೆ ವಾಚನ ಮಾಡಿ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎಂದು ಘೋಷಣೆ ಕೂಗಿದರು.

Contact Your\'s Advertisement; 9902492681

ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎಂಬ ಘೋಷ ಮೊಳಗಿಸಿದರು, ಕುಂಬ‌ ಮೇಳ, ಡೊಳ್ಳು ಕುಣಿತ, ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿ ಜಾಥಾದಲ್ಲಿ ವಿಶೇಷ ಗಮನ ಸೆಳೆಯಲಾಯಿತು.

ಸಂವಿಧಾನದ ಮಹತ್ವ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿಯಬೇಕಾಗಿರುವುದರಿಂದ ಸಂವಿಧಾನ ಜಾಗೃತಿಗಾಗಿ ಜಿಲ್ಲಾದ್ಯಂತ ಅರಿವಿನ ಸ್ತಬ್ದ ಚಿತ್ರ ಸಾಗುತ್ತಿದೆ. ಈ ಉದ್ದೇಶಕ್ಕಾಗಿ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿಶೇಷ ಉಪನ್ಯಾಸ ನೀಡುವ ಮೂಲಕ ಸರ್ವಜನಿಕರಿಗೆ ತಿಳಿಸಲಾಯಿತು.

ಜಿಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಸೀದ ಪಟೇಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೌನಮ್ಮ ಸುತಾರ ಸೇರಿದಂತೆ ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷರು, ಸದಸ್ಯರು, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಐಇಸಿ ಸಂಯೋಜಕರು, ಗ್ರಾಮಸ್ಥರು, ಸೇರಿದಂತೆ ತಾಲೂಕಾ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here