ಶರಣಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಅಭಿಯಾನ.
ಕಲಬುರಗಿ: ಸಮಾಜದ ಸುತ್ತಮುತ್ತಲಿನ ಗುಡಿ ಗುಂಡಾರಗಳು, ಐತಿಹಾಸಿಕ ಸ್ಥಳಗಳು ಹಾಗೂ ದೇವಸ್ಥಾನಗಳಲ್ಲಿ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳುವುದು ಅತೀ ಅವಶ್ಯಕ.ಈ ಮಹಾನ ಕಾಯಕದಿಂದ ಪರಿಸರ ಸ್ವಚ್ಛತೆಯಿಂದ ಕೂಡಿರಲಿದೆ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.
ಬುಧವಾರ ಅವರು ನಗರದ ಐತಿಹಾಸಿಕ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿ, ದೇವಸ್ಥಾನವನ್ನು ಸ್ವಚ್ಛಗೊಳಿಸಿ, ಸಸಿಯೊಂದನ್ನು ನೆಟ್ಟಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಸ್ವಚ್ಚತೆಯೇ ನಮ್ಮ ಮೊದಲ ಕರ್ತವ್ಯವಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯಿಂದ ಸಮಾಜ ಆರೋಗ್ಯಕರವಾಗಿರಲಿದೆ ಎಂದು ಹೇಳಿದರು. ಪಕ್ಷದ ಅಡಿಯಲ್ಲಿ ಜಿಲ್ಲೆಯಾದ್ಯಂತ ಸ್ವಚ್ಚತಾ ಕಾರ್ಯ, ಸಸಿ ನೆಡುವ ಮೂಲಕ ಅವುಗಳ ಸಂರಕ್ಷಣೆ ಕೆಲಸ ನಿರಂತರವಾಗಿ ನಡೆಯಲಿ ಎಂದು ತಿಳಿಸಿದರು.
ಇನ್ನೂ ಇದೇ ಸಂದರ್ಭದಲ್ಲಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪಾ ಅಪ್ಪಾ,ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪಾ, ಚಿರಂಜೀವಿ ದೊಡ್ಡಪ್ಪಾ ಅಪ್ಪಾ ಅವರ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸಂಸದ ಉಮೇಶ್ ಜಾಧವ್, ಬೀದರ್ ಲೋಕಸಭಾ ಸಂಸದ ಭಗವಂತ ಖೂಬಾ,ಶಾಸಕ ಬಸವರಾಜ ಮತ್ತಿಮಡು, ಮಹಾಪೌರ ವಿಶಾಲ ದರ್ಗಿ, ಉಪ ಮಹಾಪೌರ ಶಿವಾನಂದ ಪಿಸ್ತಿ, ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಚಂದು ಪಾಟೀಲ್, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಗಿರಿರಾಜ್ ಯಳಮೇಲಿ, ಶೋಭಾ ಬಾಣಿ, ಧರ್ಮಣ್ಣಾ ಇಟಗಾ ಸೇರಿದಂತೆ ಪಕ್ಷದ ಹಲವು ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.