ಕಲಬುರಗಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಸಂವಿಧಾನ ಪೀಠಿಕೆ ಮತ್ತು ಪುಸ್ತಕ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ್ ಆಗ್ರಹಿಸಿದ್ದಾರೆ.
ಈ ಕುರಿತು ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆಯ ಎಲ್ಲ ತಾಲ್ಲೂಕು ವಸತಿ ನಿಲಯಗಳಿಗೆ ಸಂವಿಧಾನ ಪೀಠಿಕೆ ಮತ್ತು ಪುಸ್ತಕ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಅವ್ಯವಹಾರ ಎಸಗಿರುವ ವ್ಯಕ್ತಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಂಡು ನಿಜವಾದ ಫಲಾನುಭವಿಗಳಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ.
ಒಂದು ಸಂವಿಧಾನದ ಪೀಠಿಕೆ ಹಾಗೂ ಪುಸ್ತಕ ಖರೀದಿಗೆ ೬೦೦೦ ರೂ. ನಿಗದಿ ಮಾಡಿ ಅಂದಾಜು ೨೭ರಿಂದ ೩೦ ಲಕ್ಷ ರೂ. ಹಣ ಇಲಾಖೆಯಿಂದ ಲೂಟಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ