ಸುರಪುರ: ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಗ್ರಾಮ ಪಮಚಾಯತಿ ಅಭಿವೃಧ್ಧಿ ಅಧಿಕಾರಿಗಳು ಸೇರಿ ಗ್ರಾಮ ಪಂಚಾಯತಿಗೆ ಬಂದಿರುವ 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ.ಆದ್ದರಿಂದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ದಲಿತ ಸೇನೆ ತಾಲೂಕು ಅಧ್ಯಕ್ಷ ಮರಿಲಿಂಗ ಹುಣಸಿಹೊಳೆ ಮಾತನಾಡಿದರು.
ತಾಲೂಕಿನ ದೇವಾಪುರ ಗ್ರಾಮ ಪಂಚಾಯತಿ ಮುಂದೆ ದಲಿತ ಸೇನೆ ದೇವಾಪುರ ಗ್ರಾಮ ಶಾಖೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಗ್ರಾಮದಲ್ಲಿ ಯಾವುದೇ ಸ್ವಚ್ಛತೆ ಕಾರ್ಯ ಕೈಗೊಂಡಿಲ್ಲ,ದಲಿತ ಕೇರಿಯಲ್ಲಿರುವ ಎರಡೂ ಕೊಳವೆಬಾವಿ ಕೆಟ್ಟಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ಇದೆ,ಗ್ರಾಮದಲ್ಲಿನ ಚರಂಡಿಗಳು ಸ್ವಚ್ಛತೆ ಇಲ್ಲದಕಾರಣ ಗ್ರಾಮದಲ್ಲಿ ಸೊಳ್ಳೆಗಳ ಕಾಟದಿಂದ ಜನರು ಸಾಂಕ್ರಾಮಿಕ ರೋಗಗಳ ಭಯದಲ್ಲಿ ಕಾಲ ಕಳೆಯುವಂತಾಗಿದೆ,ಆದ್ದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧ್ಯಕ್ಷರು ಮತ್ತು ಪಿಡಿಓ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ತಾಲೂಕು ಪಂಚಾಯತಿ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಾ.ಪಂ ಇಓ ಗೆ ಬರೆದ ಮನವಿಯನ್ನು ತಾಲೂಕು ಪಂಚಾಯತಿ ಅಕೌಂಟೆಂಟ್ ಮಲ್ಲಿಕಾರ್ಜುನ ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಿಎಸ್‍ಐ ಶರಣಪ್ಪ ಹವಲ್ದಾರ್,ಸಂಘಟನೆ ಗ್ರಾಮ ಶಾಖೆ ಅಧ್ಯಕ್ಷ ಭೀಮರಾಯ ಮುಷ್ಠಳ್ಳಿ,ಪ್ರಧಾನ ಕಾರ್ಯದರ್ಶಿ ಮೌನೇಶ,ಉಪಾಧ್ಯಕ್ಷ ಲೊಕೇಶ,ಮುತ್ತಣ್ಣ ಟಿ,ಹುಸನಪ್ಪ ಹೆಚ್.ಡಿ,ಹುಸನಪ್ಪ,ಶರಣಬಸವ,ಭೀಮರಾಯ ಎಮ್,ಮೌನೇಶ ಎಮ್,ತಿಮ್ಮಣ್ಣ ಹಯ್ಯಾಳ,ಮಹಾದೇವಪ್ಪ ಚಲುವಾದಿ,ನಾಗಪ್ಪ ಚಿಂಚೋಡಿ,ಹುಲಗಪ್ಪ ತಳವಾರ,ರಾಜು ಎಮ್.ಕೆ,ನಾಗೇಶ ತಳವಾರ,ರಾಮಪ್ಪ ಎಮ್ಮೇರ್,ಅಲೋಕಕುಮಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…