ಸುರಪುರ: ನಗರದ ಸರಕಾರಿ ಕನ್ಯಾ ಮಾದರಿಯ ಪ್ರಾಥಮಿಕ ದರಬಾರ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಹಭಾಗಿತ್ತವದಲ್ಲಿ ಪ್ರಾರಂಭಿಸಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಣೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಮಾತನಾಡಿ, ಸರಕಾರ ಇಂದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು ಶಾಲಾ ಮಕ್ಕಳಿಗೆ ಪೌಷ್ಠಿಕಾಂಶ ಒದಗಿಸುವ ಮದ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ,ಚಿಕ್ಕಿ,ಬಾಳೆಹಣ್ಣು ಹಾಗೂ ಮಕ್ಕಳಿಗೆ ಉಚಿತ ಪುಸ್ತಕ, ಶೂ ಭಾಗ್ಯ ಮತ್ತು ಸಮವಸ್ತ್ರಗಳನ್ನು ನೀಡಲಾಗುತ್ತಿದೆ ಈಗ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ರಾಗಿ ಮಾಲ್ಟ್ ಹೆಲ್ತ ಮಿಕ್ಸ ವಿತರಣೆ ಕಾರ್ಯಕ್ರಮ ಪ್ರಾರಂಭಿಸಲಾಗುತ್ತಿದ್ದು ಮಕ್ಕಳು ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು ಉತ್ತಮವಾಗಿ ಅಭ್ಯಾಸ ಮಾಡಬೇಕು ಎಂದರು.
ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿ ಇರಲು ಉತ್ತಮ ಪೌಷ್ಠಿಕಾಂಶ ಆಹಾರ ಸೇವನೆ ಬಹಳ ಮುಖ್ಯ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ ಎನ್ನುವಂತೆ ಮಕ್ಕಳು ಆರೋಗ್ಯವಂತರಾಗಿದ್ದರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಎಂದು ಹೇಳಿದರು.
ಪ್ರಭಾರಿ ಬಿಇಓ ಪಂಡಿತ ನಿಂಬೂರೆ ಮತನಾಡಿ ಶಿಕ್ಷಣ ಇಲಾಖೆಯು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವದರ ಜೊತೆಗೆ ಮಕ್ಕಳ ಆರೋಗ್ಯದ ಕಡೆಗೆ ಕೂಡಾ ಗಮನಹರಿಸುತ್ತಿದ್ದು ಈ ದಿಸೆಯಲ್ಲಿ ಅನೇಕ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಬಿ.ಆರ್.ಪಿ ಖಾದರ ಪಟೇಲ್ ಮಾತನಾಡಿದರು, ಶಾಲೆಯ ಪ್ರ.ಗು. ಸೋಮರೆಡ್ಡಿ ಮಂಗಿಹಾಳ ಅಧ್ಯಕ್ಷತೆ ವಹಿಸಿದ್ದರು, ಎಸ್‍ಡಿಎಂಸಿ ಅಧ್ಯಕ್ಷ ಸಜ್ಜನಕುಮಾರ ಕಲ್ಯಾಣಶೆಟ್ಟಿ,ಶಿಕ್ಷಣ ಸಂಯೋಜಕ ಸಣ್ಣ ಹಣಮಂತ,ಸಿಆರ್‍ಪಿ ಶಿವುಕುಮಾರ ಹಿರೇಮಠ,ಅಜೀಮ್ ಪ್ರೇಮಜೀ ಫೌಂಡೇಷನ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಬಿಜಾಸಪುರ, ಅನ್ವರ ಜಮಾದಾರ, ಶರಣಯ್ಯ ಸ್ವಾಮಿ ಶಿಕ್ಷಕರು ನಿರೂಪಿಸಿ ವಂದಿಸಿದರು.