ಕಲಬುರಗಿ: ಜಿಲ್ಲೆಯ ಮೂರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿವಿಧ ಮಾಧ್ಯಮಗಳ ವರದಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಭಾರತದ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾದ ಸೈನ್ಯದಲ್ಲಿ ಸಹಾಯಕರಾಗಿ ನೇಮಿಸಿಕೊಳ್ಳಲಾಗಿದೆ ಎಂಬ ಆಘಾತಕಾರಿ ವಿಷಯಗಳು ಬಿತ್ತರವಾಗುತ್ತಿದೆ.
ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವಂತೆ ಪತ್ರದ ಮೂಲಕ ವಿನಂತಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…