ರೇವಣಸಿದ್ದಪ್ಪ ಕಾಂತಾ ಸರಕಾರಿ ಕಾಲೇಜಿನಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ

0
19
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಗಳನ್ನು ಉಳಿಸಿ ಹೆಣ್ಣು ಮಗಳನ್ನು ಓದಿಸಿ ಎಂಬ ಘೋಷ ವಾಕ್ಯದೊಂದಿಗೆ ಬೇಟಿ ಬಚಾವೋ ಬೇಟಿ ಪಾಡಾವೋ ಯೋಜನೆಯಡಿ ಪ್ರಬಂಧ ಮತ್ತು ಚಿತ್ರಕಲೆ ಸರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್ ಅವರು ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವಯೋಗಿ ಮಠಪತಿ, ಮಲ್ಲಪ್ಪ ಮಾನೇಗಾರ್, ಅನೀಲ್ ಕುಮಾರ್, ಗೀತಾ, ಮರೇಪ್ಪ ಮೇತ್ರೆ, ಜಯಶ್ರೀ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here