ಬಿಸಿ ಬಿಸಿ ಸುದ್ದಿ

ಮೋಹನ್ ಕುಮಾರ್ ದಾನಪ್ಪರ ಕಾರ್ಯಗಳು ದಾಖಲೆಯಾಗಿ ಉಳಿಯಲಿ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿರವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ.

ಸಚಿವರಾದ ಸತೀಶ್ ಜಾರಕಿಹೊಳಿರವರು ಪತ್ರದಲ್ಲಿ “ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಕುಮಾರ್ ದಾನಪ್ಪ ಅವರು 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಆಗಸ್ಟ್ 15, 2023 ರಂದು ಕಾರ್ಗಿಲ್ ಯುದ್ಧದಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಅಂಗವಾಗಿ “ಸಲಾಂ ಸೋಲ್ಡರ್ಸ್’ ಶೀರ್ಷಿಕೆಯಡಿ, ಮತ್ತು ದೇಶದ ಯುವ ಜನತೆ ಸೇನೆ ಸೇರುವ ಕುರಿತು ಜಾಗೃತಿ ಮೂಡಿಸಲು “ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ಪರಿಕಲ್ಪನೆಯಡಿಯಲ್ಲಿ ಕೇಂದ್ರಾಡಳಿತ ಪ್ರದೇಶ ಲಡಾಖ್ ರಾಜ್ಯದ ಕಾರ್ಗಿಲ್‌ನಲ್ಲಿ ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ಧ ಸ್ಮಾರಕದವರೆಗೆ ಸತತ 5 ಗಂಟೆಗಳ ಕಾಲ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ಸುಮಾರು 42 ಕಿಲೋ ಮೀಟರ್‌ನ ವಿನೂತನ ಮ್ಯಾರಥಾನ್ ಓಟ ನಡೆಸುವ ಮುಖಾಂತರ ದೇಶದ ಯುವಕರಿಗೆ ಜಾಗೃತಿ ಮೂಡಿಸಿರುವ ಕಾರ್ಯ ಅಭಿನಂದನಾರ್ಹ.

ಆಮ್ಲಜನಕದ ಪ್ರಮಾಣ ಕಡಿಮೆಯಿರುವ ಪ್ರದೇಶದಲ್ಲಿ ಕೈಗೊಂಡಿದ್ದ ಸಾಹಸದ ಕಾರ್ಯವು ಮೋಹನ್ ಕುಮಾರ್ ದಾನಪ್ಪರ ಧೈರ್ಯ ಮತ್ತು ದೇಶಾಭಿಮಾನ ತೋರಿಸುತ್ತಿದೆ. ಈ ಪ್ರಯತ್ನ ಮಾಡಿದ ರಾಜ್ಯದ ಮತ್ತು ದೇಶದ ಪ್ರಥಮ ವ್ಯಕ್ತಿಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿ. ನಿಮ್ಮ ಈ ಕಾರ್ಯವು ದಾಖಲೆಯಾಗಿ ಉಳಿಯಲೆಂದು ಆಶಿಸುತ್ತೇನೆ.

ಮೋಹನ್ ಕುಮಾರ್ ದಾನಪ್ಪ ಅವರ ಇಂತಹ ಸಮಾಜಮುಖಿ ಕಾರ್ಯಗಳನ್ನು ನಡೆಯುತ್ತಿರುವುದು. ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದ ಕೀರ್ತಿ ಇನ್ನಷ್ಟು ಎತ್ತರಕ್ಕೆ ಎರುವಂತಾಗಲಿ ಎಂದು ಅಭಿನಂದನೆ ಪತ್ರದಲ್ಲಿ ತಿಳಿಸಿರುತ್ತಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago