ಕಲಬುರಗಿ: ಉಪನ್ಯಾಸಕರು ಮತ್ತು ಸಂಶೋಧಕರು ಬರೆಯುವ ಮನೋವೃತ್ತಿಗೆ ಹಾಗೂ ನೈಜಾಧರಿತ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಕೆಲಸಕ್ಕೆ ವಿಶ್ವವಿದ್ಯಾಲಯ ಯಾವಾಗಲೂ ಪ್ರೋತ್ಸಾಹಿಸುತ್ತದೆ. ಈ ಬರೆಯುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳುವ ಮೂಲಕ ಶೈಕ್ಷಣಿಕ ವೃತ್ತಿ ಬದುಕನ್ನು ಅಭಿವೃದ್ಧಿಪಡಿಸಿಕೊಳ್ಳಿ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪಾ ಹೇಳಿದರು.
ಶರಣಬಸವೇಶ್ವರ ಸಂಸ್ಥಾನದ ದಾಸೋಹ ಮಹಾಮನೆಯಲ್ಲಿ ಬುಧವಾರ ವಿಶ್ವವಿದ್ಯಾಲಯದ ಪಬ್ಲಿಕೇಶನದಿಂದ ಪ್ರಕಟಣೆಗೊಂಡ ಕನ್ನಡ ವಿಭಾಗದ ಪಠ್ಯಪುಸ್ತಕಗಳ ಸರಣಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಕರು ಪ್ರಸಿದ್ಧ ಲೇಖಕರ ಬರಹದ ಬಗ್ಗೆ ವಿಮರ್ಶಾತ್ಮಕ ಬರಹಗಳನ್ನು ಬರೆಯುವ ಬದಲು, ಬೇರೆ ಬೇರೆ ಭಾಷೆಯ ಕೃತಿಗಳನ್ನು ಬರೆಯುವುದರ ಮೂಲಕ ಕನ್ನಡದ ಪಠ್ಯಪುಸ್ತಕಕ್ಕೆ ಪರಿಚಯಿಸಬೇಕು. ತಮ್ಮ ಮೂಲ ಕೃತಿಯನ್ನು ತರಗತಿಯಲ್ಲಿ ಪಠ್ಯವಾಗಿ ಕಲಿಸಲು ಶಿಕ್ಷಕರಿಗೆ ಅತೀ ಸುಲಭವಾಗಿಸುವದಲ್ಲದೇ, ವಿದ್ಯಾರ್ಥಿಗಳು ಶಿಕ್ಷಕರನ್ನು ಅನುಕರಿಸಲು ಮತ್ತು ಬರೆಯುವ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.
ವಿಶ್ವವಿದ್ಯಾಲಯ ತರಗತಿಯಲ್ಲಿ ಬೋಧನೆ, ಚರ್ಚೆ ಮತ್ತು ಬರವಣಿಗೆ ಹಾಗೂ ಎರಡು ಮತ್ತು ಮೂರು ಗಂಟೆಗಳ ತರಗತಿಯನ್ನು ಅಳವಡಿಸಿರುವುದು ವಿದ್ಯಾರ್ಥಿಗಳ ಬರೆಯುವ ಕೌಶಲ್ಯ ಹಾಗೂ ತರಗತಿಯಲ್ಲಿಯ ಕಲಿಕೆಯನ್ನು ಹೆಚ್ಚು ಪರಿಣಾಮಕಾರಿ ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾಭಾಸ ಪೂರ್ಣಿಗೊಳಿಸಿ ಹೊರಬರುವ ಹೊತ್ತಿಗೆ ಉದ್ಯೋಗ ಪಡೆದುಕೊಳ್ಳುವ ಉದ್ದೇಶದಿಂದ ಪ್ರತಿ ಸೆಮೆಸ್ಟರ್‌ದಲ್ಲಿ ಪ್ರಾಯೋಗಿಕ ಕಲಿಕೆ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಶರಣಬಸವ ವಿಶ್ವವಿದ್ಯಾಲಯವನ್ನು ವಿಶ್ವದ ೨೦೦ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾನ್ನಾಗಿ ಪರಿವರ್ತಿಸಬೇಕು. ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳಿಗೆ ಪ್ರತಿ ಕಾರ್ಯದಲ್ಲಿ ಸಹಕರಿಸಬೇಕು ಮತ್ತು ಮಾರ್ಗದರ್ಶನ ನೀಡಬೇಕು. ವಿವಿಯಲ್ಲಿ ಬೋಧನೆ, ಕಲಿಕೆ ಮತ್ತು ಸಂಶೋಧನಾ ಚಟುವಟಿಕೆಗಳು ನಿರಂತರಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಪತಿ. ಡಾ. ನಿರಂಜನ್ ನಿಷ್ಠಿ, ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡಾ. ಶಿವರಾಜ ಶಾಸ್ತ್ರಿ ಮಾತನಾಡಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಮಾತೋಶ್ರಿ ದಾಕ್ಷಾಯಿಣಿ ಎಸ್.ಅಪ್ಪಾ, ಸಮ ಕುಲಪತಿ ಡಾ. ವಿ.ಡಿ. ಮೈತ್ರಿ, ಡೀನ್ ಡಾ. ಲಕ್ಷ್ಮಿ ಮಾಕಾ ಇದ್ದರು.
ಕನ್ನಡ ವಿಭಾಗದ ಪ್ರಾದ್ಯಾಪಕರಾದ ಡಾ. ಸಾರಿಕಾದೇವಿ ಕಾಳಿಗಿ, ಡಾ. ಪ್ರಭಾವತಿ ಚಿತಕೋಟಿ, ಡಾ. ಸುಮಂಗಲಾ ರೆಡ್ಡಿ, ಡಾ.ಚಿದಾನಂದ ಚಿಕ್ಕಮಠ, ಡಾ. ನಾನಾಸಾಹೇಬ್ ಹೊಸ ಪಠ್ಯ ಪುಸ್ತಕಗಳನ್ನು ಬರೆದಿದ್ದಾರೆ. ಒಟ್ಟು ೭ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…