ಕಲಬುರಗಿ: ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಬೇಕು. ಮಕ್ಕಳಲ್ಲಿ ಹೆತ್ತವರ ಬಗ್ಗೆ ಭಕ್ತಿ ಮೂಡಿಸಬೇಕು. ಅದರಿಂದ ಸಂಸ್ಕಾರ ಬೆಳೆದು, ಭವಿಷ್ಯ ಉಜ್ವಲ ವಾಗುತ್ತದೆ ಎಂದು ಜಿಡಗಾ ಮುಗಳಖೋಡದ ಶ್ರೀ ಡಾ.ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಉದನೂರದ ಹಿರೇಗೌಡ ಲೇಔಟ್‍ನಲ್ಲಿನ ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಅಮ್ಮನ ಕೈ ತುತ್ತು, ತಂದೆ ತಾಯರ ಪಾದ ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀ ಸಿದ್ದರಾಮ ಶಿವಯೋಗಿಗಳ ಆಶೀರ್ವಾದ ಮಕ್ಕಳ ಮೇಲೆ ಸದಾ ಇದ್ದು, ಸಂಸ್ಕಾರವಂತ ಮಕ್ಕಳು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಬೆಳೆಯಲಿದ್ದಾರೆ ಎಂದು ಹೇಳಿದರು.
ಶ್ರೀನಿವಾಸ ಸರಡಗಿಯ ಶ್ರೀ ರೇವಣಸಿದ್ದ ಶಿವಾಚಾರ್ಯರು ಮಾತನಾಡಿ, ಪ್ರತಿಯೊಬ್ಬರೂ ಸಂಸ್ಕಾರವಂತರಾದಾಗ ಸಮಾಜದಲ್ಲಿ ಶಾಂತಿ, ನೆಮ್ಮದಿ, ಪರಸ್ಪರ ಗೌರವ ದೊರೆಯಲು ಸಾಧ್ಯ. ಮಕ್ಕಳಲ್ಲಿ ಪ್ರೀತಿ, ವಿಶ್ವಾಸ ಬಿತ್ತುವ ಕೆಲಸ ಆಗಲಿ. ಸಂಸ್ಕøತಿಯುಳ್ಳವರು ಮಾತ್ರ ಸುಭದ್ರ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಕೆಕೆಆರ್‍ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ, ಶಿಕ್ಷಣವೆಂದರೆ ಸಂಸ್ಕಾರ ಎಂಬ ಮಾತು ಪಾದಪೂಜೆ, ಕೈತುತ್ತು ಊಟ ಕಾರ್ಯಕ್ರಮಗಳಿಂದ ಸಾಕಾರವಾಗುತ್ತದೆ. ಸಂಸ್ಥೆಗಳ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ, ಸಾಧಕರಾಗಿ ಹೊರಹೊಮ್ಮಬೇಕು ಎಂದು ಹೇಳಿದರು.
ರಾಜಕುಮಾರ ಉದನೂರ ಪ್ರಾಸ್ತಾವಿಕ ಮಾತನಾಡಿದರು. ಭಾಗಮ್ಮ ಉದನೂರ ಅಧ್ಯಕ್ಷತೆ ವಹಿಸಿದ್ದರು. ಮಾತೋಶ್ರೀ ಶ್ರೀ ಸಿದ್ದಮ್ಮಾಂಬೆ ತಾಯಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಪಿಡಬ್ಲುಡಿ ಇಂಜಿನಿಯರ್ ಸುರೇಶ ಶರ್ಮಾ, ಬಿಜೆಪಿ ಮುಖಂಡ ಗಿರಿರಾಜ ಯಳಮೇಲಿ, ಬಿಇಒ ವಿಜಯಕುಮಾರ ಜಮಖಂಡಿ, ಪಿಐ ಬಸವರಾಜ ತೇಲಿ, ಪ್ರಕಾಶ ಪಾಟೀಲ್ ಹೀರಾಪುರ, ಪವನಕುಮಾರ ವಳಕೇರಿ, ಹನುಮಂತರಾಯ ಕಪ್ನೂರ, ವಿಶ್ವನಾಥ ಪೆÇಲೀಸ್ ಪಾಟೀಲ್, ಶಿವಶಂಕರ ಬಿರಾದಾರ, ಆನಂದ ಲೇಂಗಟಿ, ರುದ್ರಮನಿ ಹಿರೇಮಠ, ಆನಂದಿ ಹಿರೇಮಠ ಇತರರಿದ್ದರು. ಗುರು ಸಾಲಿಮಠ ವಂದಿಸಿದರು. ಸೂರ್ಯಕಾಂತ ಡುಮ್ಮ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಶಿಕ್ಷಕಿ ನಕಾಶ ಕುಮಾರಿ, ಅರ್ಚನಾ ನಿರೂಪಣೆ ಮಾಡಿದರು.
ಮಾತೃವಾತ್ಸಲ್ಯದ ಸಂಗಮ; ಅಪ್ಪಾಜಿ ಗುರುಕುಲದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳು ಹೆತ್ತವರ ಬಾಂದವ್ಯದ, ಹೆತ್ತ ಕರುಳಿನ ವಾತ್ಸಲ್ಯದ ಸಂಗಮವೇ ಸೃಷ್ಟಿಯಾಗಿತ್ತು. ಸಂಸ್ಥೆಯ ನೂರಾರು ಮಕ್ಕಳು ತಂದೆ, ತಾಯಿ ಪಾದಪೂಜೆ ಮಾಡಿ, ಭಕ್ತಿಯಿಂದ ನಮಿಸಿದರು. ನಂತರ ತಾಯಂದಿರು ಮಕ್ಕಳಿಗೆ ಕೈತುತ್ತು ಉಣಿಸುವ ಮೂಲಕ ಮಾತೃವಾತ್ಸಲ್ಯವನ್ನು ಪುನಃ ಸಾಬೀತುಪಡಿಸಿದರು.
ಸಾಂಸ್ಕೃತಿಕ ಸಮ್ಮಿಲನ; ಅಪ್ಪಾಜಿ ಗುರುಕುಲ ಉತ್ಸವದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಭಿನ್ನ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ನಾಟಕ, ಸಂಗೀತ, ದೇಶಭಕ್ತಿ, ದೈವಭಕ್ತಿ ಸೇರಿದಂತೆ ನೂತನ ಹಾಡುಗಳಿಗೂ ನೃತ್ಯ ಮಾಡಿದ ಮಕ್ಕಳು ಪ್ರೇಕ್ಷರನ್ನು ಕಲಾಲೋಕಕ್ಕೆ ಕೊಂಡ್ಯೊಯ್ದರು. ಕಳೆದ ವರ್ಷ ಹೆಚ್ಚು ಅಂಕ ಪಡೆದ ಹಳೇ ವಿದ್ಯಾರ್ಥಿಗಳಿಗೆ, ವಿವಿಧ ಆಟೋಟದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…