ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ 925 ಚಾಲಕ ಹಾಗೂ 694 ಚಾಲಕ-ಕಂ-ನಿರ್ವಾಹಕ ಒಟ್ಟು 1,619 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಶುಕ್ರವಾರ ಅಂತಿಮ ಆಯ್ಕೆ ಪಟ್ಟಿಯನ್ನು ನಿಗಮದ ವೆಬ್ ಸೈಟ್ https://kkrtcjobs.karnataka.gov.in ರಲ್ಲಿ ಪ್ರಕಟಿಸಿದೆ.
ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳ ನಿಯೋಜನೆ, ಘಟಕ ಹಂಚಿಕೆ ಪ್ರಕ್ರಿಯೆ ಇದೇ ಫೆಬ್ರವರಿ 26 ರಿಂದ 28ರ ವರೆಗೆ ಕಲಬುರಗಿಯ ಕೆ.ಕೆ.ಆರ್.ಟಿ.ಸಿ ಕೇಂದ್ರ ಕಚೇರಿ ಪಕ್ಕದಲ್ಲಿನ ಆರ್ಚಿಡ್ ಮಾಲ್ ಹಿಂಭಾಗದ ನಿಗಮದ ಕಟ್ಟಡದಲ್ಲಿ (ಮೂಲ ದಾಖಲಾತಿ ಪರಿಶೀಲಿಸಿದ ಸ್ಥಳ) ಕೌನ್ಸಿಲಿಂಗ್ ಮೂಲಕ ನಡೆಸಲಾಗುತ್ತಿದ್ದು, ಆಯ್ಕೆಗೊಂಡ ಎಲ್ಲಾ ಅಭ್ಯರ್ಥಿಗಳು ತಪ್ಪದೆ ಕೌನ್ಸಿಲಿಂಗ್ ಗೆ ಹಾಜರಾಗುವಂತೆ ಸಂಸ್ಥೆಯು ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ.
2020ರಲ್ಲಿ ಈ 1,619 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿತ್ತು. ಇದರಲ್ಲಿ 1,295 ಸ್ಥಳೀಯ ವೃಂದದ ಹುದ್ದೆಗಳು ಹಾಗೂ 141 ಪರಿಶಿಷ್ಟ ಜಾತಿ ಮತ್ತು ವರಿಶಿಷ್ಟ ಪಂಗಡಕ್ಕೆ ಸೇರಿದ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳು ಸೇರಿವೆ.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ 6366374977 ಮತ್ತು 08472-227687 ಗಳಿಗೆ ಸಂಪರ್ಕಿಸಲು ಕೋರಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…