ಮುತ್ತಗಾ: ಶ್ರೀ ಕಂಠಿಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಫೆ.25ರಂದು

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದ ಶ್ರೀ ಕಂಠಿಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಫೆ. 25 ರಂದು ನಡೆಯಲಿದೆ ಎಂದು ಶ್ರೀ ಕಂಠಿಬಸವೇಶ್ವರ ದೇವಸ್ಥಾನ ಸಮಿತಿಯ ಮೃತ್ಯುಂಜಯ್ ಹಿರೇಮಠ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 6 ಗಂಟೆಗೆ ಗಂಗಾಸ್ನಾನ, ಹೋಮಹವನ, ನವಗ್ರಹ ಪೂಜೆ, ಮೂರ್ತಿಗೆ ರುದ್ರಾಭಿಷೇಕ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಜಿಡಗಾ ಹಾಗೂ ಮುಗುಳಖೋಡ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳಿಂದ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ.

ನಂತರ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಮುತ್ತಗಾ ಗ್ರಾಮಸ್ಥರಿಂದ ನಾಣ್ಯಗಳ ತುಲಾಭಾರ ನಡೆಯಲಿದೆ. ಶ್ರೀ ಗಳಿಂದ ಆಶೀರ್ವಚನ ಹಾಗೂ ಪ್ರಸಾದ ನಡೆಯಲಿದೆ. ಆದ್ದರಿಂದ ಮುತ್ತಗಾ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮೃತ್ಯುಂಜಯ್ ಹಿರೇಮಠ ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420