ಸುರಪುರ:ಅದ್ಧೂರಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ

0
13

ಸುರಪುರ :ನಗರಕ್ಕೆ ಆಗಮಿಸಿದ್ದ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಸಮಾಜ ಕಲ್ಯಾಣ ಇಲಾಖೆ,ತಾಲೂಕು ಆಡಳಿತ,ತಾಲೂಕು ಪಂಚಾಯತಿ ಹಾಗೂ ನಗರಸಭೆ ವತಿಯಿಂದ ನಡೆಸಲಾದ ಭಾರತ ಸಂವಿಧಾನ ಜಾಗೃತಿ ಜಾಥಾವನ್ನು ಸಂಜೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು,ನಂತರ ಡಾ:ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಜಾಥಾದ ರಥದ ವಾಹನದಲ್ಲಿದ್ದ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯಲ್ಲಿ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಹಾಗೂ ಮಹಿಳೆಯರಿಂದ ಪೂರ್ಣ ಕುಂಭ ಕಳಸ, ಛದ್ಮವೇಷ, ಡೊಳ್ಳು ಕುಣಿತ, ಅಂಬೇಡ್ಕರ್ ಮತ್ತು ಸಂವಿಧಾನದ ಗೀತೆಗಳನ್ನು ಹಾಡುವ ಮೂಲಕ ಸಂಭ್ರಮದ ಮೆರವಣಿಗೆ ನಡೆಯಿತು.ನಗರದ ಪ್ರಮುಖ ಬೀದಿಗಳ ಮೂಲಕ ಮಹಾತ್ಮ ಗಾಂಧಿ ವೃತ್ತ ದಿಂದ ತಹಸಿಲ್ದಾರ್ ಕಚೇರಿ ವರೆಗೆ ನಡೆಸಲಾಯಿತು.

Contact Your\'s Advertisement; 9902492681

ಮೆರವಣಿಗೆಯಲ್ಲಿ ಯಾದಗಿರಿ ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಭಾಗವಹಹಿಸಿ ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು, ಬಿಜೆಪಿ ಯುವ ಮುಖಂಡ ಶಂಕರ ನಾಯಕ, ತಹಸೀಲ್ದಾರ್ ಕೆ.ವಿಜಯಕುಮಾರ, ತಾಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಶ್ರುತಿ.ಎಂ, ಎಸ್‍ಟಿ ಇಲಾಖೆ ಅಧಿಕಾರಿ ಮೊಹ್ಮದ್ ಸಲೀಂ, ಪೌರಯುಕ್ತ ಜೀವನಕುಮಾರ ಕಟ್ಟಿಮನಿ, ಪ್ರಭಾರಿ ಬಿಇಒ ಪಂಡಿತ್ ನಿಂಬೂರ, ಖಾದರ್ ಪಟೇಲ್, ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ನೂರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here