ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ಕಾಂಗ್ರೆಸ್ ಧರಣಿ

0
30

ಕಲಬುರಗಿ: ರಾಜ್ಯದಲ್ಲಿ ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಕೂಡಲೇ ಸರ್ಕಾರ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಗುರುವಾರ ನಗರದ ಜಗತ್ ವೃತ್ತದಲ್ಲಿನ ಡಾ. ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಬಳಿ ಕಾರ್ಯಕರ್ತರು ಧರಣಿ ನಡೆಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಶರಣಕುಮಾರ್ ಮೋದಿ, ಮುಖಂಡರಾದ ಭೀಮರಾವ್ ಟಿ.ಟಿ., ಸಂತೋಷ್ ಪಾಟೀಲ್ ದನ್ನೂರ್, ಈರಣ್ಣ ಝಳಕಿ, ಲಿಂಗರಾಜ್ ತಾರಫೈಲ್, ಸೈಯೀದ್ ಅಹ್ಮದ್, ಶಿವಕುಮಾರ್ ಬಾಳಿ, ಶ್ರೀಮತಿ ಲತಾ ರವಿ ರಾಠೋಡ್, ಪ್ರಭಾವತಿ ಪಾಟೀಲ್, ರೇಣುಕಾ ಚವ್ಹಾಣ್, ವಾಣಿಶ್ರೀ ಮುಂತಾದವರು ಪಾಲ್ಗೊಂಡಿದ್ದರು.

Contact Your\'s Advertisement; 9902492681

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಎರಡು ಬಾರಿ ನೆರೆಯಿಂದ ಸಾಕಷ್ಟು ಜನ ಮನೆ, ಮಠಗಳನ್ನು ಕಳೆದುಕೊಂಡಿದ್ದಾರೆ. ಕೇಂದ್ರ ಹಣಕಾಸು ಸಚಿವರೂ ಸೇರಿದಂತೆ ಮುಖ್ಯಮಂತ್ರಿಗಳು ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಆದಾಗ್ಯೂ, ಸಂತ್ರಸ್ತರಿಗೆ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.

ನೆರೆ ಹಾವಳಿಯಿಂದ ಒಂದು ಲಕ್ಷ ಕೋಟಿ ರೂ.ಗಳಿಗಿಂತಲೂ ಅಧಿಕ ಹಾನಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here