ಹೈದರಾಬಾದ್ ಕರ್ನಾಟಕ

ಕಲಬುರಗಿ ಅಂಬಿಗರ ಚೌಡಯ್ಯ ಅಧ್ಯಯನ ಪೀಠಕ್ಕೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭೇಟಿ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನ ಅಧ್ಯಯನ ಪೀಠಕ್ಕೆ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರು ಭಾನುವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ರಿಶೀಲನೆ ನಡೆಸಿದ ಕಮಕನೂರ ಬಿರುಕು ಬಿಟ್ಟಿರುವ ಕಟ್ಟಡ, ಸುಣ್ಣ ಬಣ್ಣ ಬಳಿಯದ ದೃಶ್ಯ, ಪೀಠೋಪಕರಣ ಕೊರತೆ ಮತ್ತು ಶೌಚಾಲಯ ಅವ್ಯವಸ್ಥೆ ಮತ್ತು ಚೌಡಯ್ಯ ಅವರ ಕುರಿತಾದ ಒಂದು ಪುಸ್ತಕ ಇಲ್ಲದಿರುವುದನ್ನು ಕಂಡು ಅಸಮಾಧಾನಗೊಂಡು, ಕೂಡಲೇ ಈ ಪೀಠಕ್ಕೆ ಎಷ್ಟು ಅನುದಾನ ಬಂದಿದೆ, ಎಷ್ಟು ಖರ್ಚಾಗಿದೆ ಮತ್ತು ಯಾವ ಪೀಠೋಪಕರಣ ಖರೀದಿಸಲಾಗಿದೆ ಅದಕ್ಕೆ ಎಷ್ಟು ಖರ್ಚಾಗಿದೆ. 50 ಲಕ್ಷಕ್ಕೆ ಎಫ್ ಡಿ ಹಣಕ್ಕೆ ಎಷ್ಟು ಬಡ್ಡಿ ಜಮಾವಣೆಯಾಗಿದೆ ಎಂಬುದರ ಕುರಿತು ನಿಖರ ವರದಿ ಶೀಘ್ರದಲ್ಲಿ ನೀಡುವಂತೆ ನಿರ್ದೇಶಕ ಎಸ್.ಟಿ.ಪೋತೆ ಅವರಿಗೆ ಸೂಚಿಸಿದರು.

ಪ್ರತಿ ವರ್ಷ ಕಾಟಾಚಾರಕ್ಕೆ ಪೀಠದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಮಾಡಿ ಕೈತೊಳೆದುಕೊಳ್ಳಲಾಗುತ್ತಿದೆ. ಸಮಾಜದ ಜನಪ್ರತಿನಿಧಿಗಳಿಗೆ, ಸಲಹಾ ಸಮಿತಿ ಪದಾಧಿಕಾರಿಗಳಿಗೆ, ಸಮಾಜದ ಮುಖಂಡರಿಗೆ 16 ವರ್ಷದಲ್ಲಿ ಒಮ್ಮೆಯೂ ಆಹ್ವಾನ ಮಾಡಿಲ್ಲ ಮತ್ತು ಚೌಡಯ್ಯ ಅವರ ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ. ಮುಂದೆ ಹೀಗಾಗದಂತೆ ಕ್ರಮಕೈಗೊಳ್ಳಬೇಕು. ಸಲಹಾ ಸಮಿತಿ ಸಭೆ ಕರೆದು ಸಮಾಜದ ಜನಪ್ರತಿನಿಧಿಗಳಿಗೆ ಮತ್ತು ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಪೀಠದಲ್ಲಿ ಚೌಡಯ್ಯನವರ ಮೂರ್ತಿ ಅನಾವರಣಗೊಳಿಸುವ ನಿರ್ಣಯ ಕೈಗೊಳ್ಳಬೇಕು ೆಂದರು.

ಈ ಪೀಠ ವಿಶ್ವವಿದ್ಯಾಲಯದಲ್ಲಿ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ. ನಾನೇ ಪೀಠ ಹುಡುಕಲು ಅರ್ಧ ಗಂಟೆ ಬೇಕಾಯಿತು. ಪೀಠಕ್ಕೆ ಬರಲು ಮಾರ್ಗ ಸೂಚಿಯ ನಾಮಫಲಕ ಅಳವಡಿಸಬೇಕು. ಪ್ರತಿ ವರ್ಷ ನಿರಂತರವಾಗಿ ಚೌಡಯ್ಯನವರ ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಬೇಕು. ಪೀಠದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿರುವ ಅನುದಾನ ಸರಕಾರದಿಂದ ಕೊಡಿಸುವ ಭರವಸೆ ನೀಡಿದರು.

ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ಅವರು ಅಂಬಿಗರ ಚೌಡಯ್ಯನ ಪೀಠದಿಂದ ನಿರ್ಮಾಣವಾಗಿರುವ ಭವನ ಗುಲ್ಬರ್ಗ ವಿಶ್ವವಿದ್ಯಾಲಯದೊಳಗಿದ್ದು, ಭವನವನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದ್ದು, ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದರು. ಇದಕ್ಕೆ ತೃಪ್ತರಾಗದ ಕಮಕನೂರ ಅವರು, ಭವನ ನಿರ್ಮಾಣ ಮಾಡಲಾಗಿದೆ. ಆದರೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ ಇರುವುದರಿಂದ ಭವನ ಬೀದಿನಾಯಿಗಳ ಆವಾಸ ಸ್ಥಾನವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲು ಒತ್ತಾಯಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಈ ಹಿನ್ನೆಲೆಯಲ್ಲಿ ವಾಸ್ತವಿಕ ಸ್ಥಿತಿಗತಿ ತಿಳಿದುಕೊಳ್ಳಲು ಕಮಕನೂರ ಅವರು ಖುದ್ದಾಗಿ ಪೀಠಕ್ಕೆ ಭೇಟಿ ನೀಡಿದರು.

ಭೇಟಿ ಸಂದರ್ಭದಲ್ಲಿ ಕೋಲಿ ಸಮಾಜದ ಮುಖಂಡರಾದ ರಮೇಶ ನಾಟೇಕಾರ, ಸಿದ್ದು ಬಾನರ, ವಿಜಯಕುಮಾರ ಹದಗಲ, ಶಿವಾನಂದ ಹೊನಗುಂಟಿ, ಸಂದೇಶ ಕಮಕನೂರ ಸೇರಿದಂತೆ ಇತರರಿದ್ದರು.  ಪೀಠದ ನಿರ್ದೇಶಕ ಪ್ರೊ.ಎಸ್.ಟಿ.ಪೋತೆ, ಗುಲಬರ್ಗಾ ವಿಶ್ವವಿದ್ಯಾಲಯದ ರಿಜಿಸ್ಟರ್ ಶರಣಪ್ಪ ಸತ್ಯಂಪೇಟೆ ಅವರನ್ನು ಹೂಗುಚ್ಚ ನೀಡಿ ವಿಧಾನ ಪರಿಷತ್ ಸದಸ್ಯರಿಗೆ ಗೌರವಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago