ಬಿಸಿ ಬಿಸಿ ಸುದ್ದಿ

ಸಾಂಸ್ಕøತಿಕ ಶ್ರೀಮಂತಿಕೆಗೆ ಸಮ್ಮೇಳನಗಳು ಅವಶ್ಯಕ: ಡಾ. ಟಿ ಎಂ ಭಾಸ್ಕರ್

ಕಲಬುರಗಿ: ನಾಡಿನ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಶ್ರೀಮಂತಿಕೆಗೆ ಸಮ್ಮೇಳನಗಳು ತುಂಬಾ ಅವಶ್ಯವಾಗಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ್ ಹೇಳಿದರು.

ನಗರದ ಕನ್ನಡ ಭವನದಲ್ಲಿ ನಡೆದ ಸಾಂಸ್ಕøತಿಕ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮ್ಮೇಳನಗಳು ಸಾಮಾಜಿಕ ಜವಾಬ್ದಾರಿ ಹೊಂದಿವೆ. ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಮಡುಕೊಳ್ಳುವ ದಿಸೆಯಲ್ಲಿ ಸಾಗಬೇಕು. ಕೈಗೊಂಡ ನಿರ್ಣಯಗಳ ಕುರಿತು ಜಾರಿಯಾಗಬೇಕು. ಹಾಗೂ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು. ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಅಂಗಟಿ-ಮುಂಗಟ್ಟುಗಳ ನಾಮಫಲಕಗಳು ಸಂಪೂರ್ಣ ಕನ್ನಡಮಯವಾಗಬೇಕು. ಅಂಥ ಸಂಕಲ್ಪ ಕನ್ನಡಿಗರಲ್ಲಿ ಮೂಡಿ ಬರಬೇಕಾಗಿದೆ. ಜಿಲ್ಲಾ ಕಸಾಪ ಸಾಂಸ್ಕøತಿಕ ಪರಂಪರೆಗಾಗಿ ಶ್ರಮಿಸುತ್ತಿದೆ. ನಮ್ಮನ್ನು ಗುರುತಿಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿದ್ದು, ಪರಿಷತ್ತಿನ ಗೌರವ ಇನ್ನಷ್ಟು ಹೆಚ್ಚಿಸಿದಂತಾಗಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಹಿಂದಿನ ಸಮ್ಮೇಳನ ಸರ್ವಾಧ್ಯಕ್ಷರುಗಳ ಬದುಕು ಮತ್ತು ಬರಹಗಳ ಕುರಿತಾಗಿ ಸಾಹಿತಿ ಧರ್ಮಣ್ಣ ಎಚ್ ಧನ್ನಿ ಸಂಪಾದಕತ್ವದಲ್ಲಿ ಸಂಕಥನ ಎಂಬ ಕೃತಿ ಜನಾರ್ಪಣೆ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಗ್ರಂಥವಾಗಲಿದೆ ಎಂದರು. ಆಡಂಬರವಿಲ್ಲದ ಅರ್ಥಪೂರ್ಣ ಸಮ್ಮೇಳನವನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸಾಹಿತಿ ಡಾ. ಲಿಂಗಪ್ಪ ಗೋನಾಲ, ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಶರಣರಾಜ್ ಛಪ್ಪರಬಂಧಿ, ಧರ್ಮಣ್ಣ ಎಚ್ ಧನ್ನಿ, ಕಲ್ಯಾಣಕುಮಾರ ಶೀಲವಂತ, ಧರ್ಮಣ್ಣ ಎಚ್ ಧನ್ನಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಸಿದ್ಧಲಿಂಗ ಬಾಳಿ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಮಂಜುನಾಥ ಕಂಬಾಳಿಮಠ, ಶಿವಾನಂದ ಪೂಜಾರಿ, ಶರಣಬಸಪ್ಪ ನರೂಣಿ, ಶಿವಕುಮಾರ ಸಿ.ಹೆಚ್., ಶಿವಶಂಕರ ವರ್ಮಾ, ನಾಗಪ್ಪ ಎಂ ಸಜ್ಜನ್, ರಾಜೇಶ್ವರಿ ಸಾಹು ವಾಡಿ, ವಿನೋದಕುಮಾರ ಜೇನವೇರಿ, ನಾಗೇಂದ್ರಪ್ಪ ಮಾಡ್ಯಾಳೆ, ಡಾ. ಶಿವಶರಣಪ್ಪ ಮೋತಕಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago