ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಶೋಕ ಸಾಗರದಲ್ಲಿ ಜನತೆ

0
22

ಸುರಪುರ: ಕರ್ನಾಟಕ ರಾಜ್ಯ ಉಗ್ರಾನ ನಿಗಮದ ಅಧ್ಯಕ್ಷರು ಹಾಗೂ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತ ದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 2 ವಾರಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿ ಚಿಕಿತ್ಸೆ ಪಡೆದಿದ್ದರು.ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರು.ಮೂರು ದಿನಗಳ ಹಿಂದಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

Contact Your\'s Advertisement; 9902492681

ಭಾನುವಾರ ಮಧ್ಹ್ಯಾನ 2 ಗಂಟೆಯ ವೇಳೆಗೆ ತೀವ್ರ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಇಡೀ ಸುರಪುರ ಮತ ಕ್ಷೇತ್ರದಾದ್ಯಂತ ಜನರಲ್ಲಿ ಶೋಕ ವ್ಯಕ್ತವಾಗಿ,ಎಲ್ಲೆಡೆ ಜನರು ದುಖಃ ವ್ಯಕ್ತಪಡಿಸಿರುವುದು ಕಂಡುಬಂತು.ವ್ಯಾಪಾರಸ್ಥರು ಸ್ವಯಃ ಪ್ರೇರಿತರಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಪ್ರೇರಿತ ಬಂದ್ ಆಚರಿಸಿದರು.

ಶಾಸಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲೆಡೆಯಿಂದ ಜನಸಾಗರ ಶಾಸಕರ ಗೃಹ ಕಚೇರಿ ವಸಂತ ಮಹಲ್ ಕಡೆಗೆ ಹರಿದು ಬಂದು ಶೋಕ ವ್ಯಕ್ತಪಡಿಸಿದರು.

ಶಾಸಕರು ನಿಧನದ ಸುದ್ದಿ ತಿಳಿದು ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ನಗರದ ಶಾಸಕರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಅಲ್ಲದೆ ಎಸ್ಪಿ ಡಾ:ಸಂಗೀತಾ ಜಿ,ಡಿವೈಎಸ್ಪಿ ಜಾವಿದ್ ಇನಾಂದಾರ್ ಕೂಡ ಭೇಟಿ ನೀಡಿದರು.ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here