ಕಲಬುರಗಿ: ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ನೀಡುವುದಾಗಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರು ಘೋಷಣೆ ಮಾಡಿದರು
ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಕೆ) ಗ್ರಾಮದ ಬಳಿ ನಿರ್ಮಿಸಿದ ಶ್ರೀ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದರು.
ಸಮಸ್ಯೆ, ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ರೆಡ್ಡಿ ಜನಾಂಗಕ್ಕೆ ಎಂದೂ ಬಡತನ ನೀಡಬಾರದು ಎಂಬ ವರದಾನ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ಮಹಾಸ್ವಾಧಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಶೋಧನಾ ಕೇಂದ್ರ ಮತ್ತು ಅಧ್ಯಯನ ಪೀಠವು ಅತ್ಯಂತ ಕ್ರೀಯಾಶೀಲವಾಗಿ ಕೆಲಸ ಮಾಡಲು ಬೇಕಾದ ಸೌಲಭ್ಯನೀಡಲು ಸರಕಾರದ ಗಮನ ಸೆಳೆಯಲಾಗುವುದು ಮತ್ತು ಈ ಪೀಠಕ್ಕೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ಅವರು ಹೆಚ್ಚಿನ ಅನುದಾನ ನೀಡಬೇಕು ಮನವಿ ಮಾಡಿದರು.
ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಸಂಸದ ಡಾ. ಉಮೇಶ್ ಜಾಧವ, ಶರಣ ರೆಡ್ಡಿ ಪಾಟೀಲ್ ಜಿಲ್ಲಡಪಲ್ಲಿ, ಡಾ. ನಾಗಭೂಷಣ ರೆಡ್ಡಿ ಪಾಟೀಲ್ ಹೂಡಾ, ಶಿವಲಿಂಗ ರೆಡ್ಡಿ ಪಾಟೀಲ್ ಬೆನಕನಹಳ್ಳಿ, ಲತಾ ಹೇಮರೆಡ್ಡಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…