ಕಲಬುರಗಿ: ಭಾರತ ಸರಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜಕೋಟದಲ್ಲಿ ಶೇಖ ರೋಜಾದ ೨೦ ಕೋಟಿ ರೂ.ಗಳ ವೆಚ್ಚದ ಹಾಗೂ ಜೇವರ್ಗಿ ೨೧ ಕೋಟಿ ರೂ.ಗಳ ವೆಚ್ಚದ ನೂರು ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಿದರು.
ಈ ಸಮಾರಂಭ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ, ಕೇಂದ್ರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಪ್ರೊ. ಎಸ್.ಪಿ. ಸಿಂಗ್ ಬಫೇಲ್, ಕೇಂದ್ರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವರಾದ ಡಾ. ಭಾರತಿ ಪ್ರವೀಣ ಪವಾರ್ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತ್ತು.
ಶೇಖ್ ರೋಜಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯೋಜನೆ ಮಾಡಿದ ವರ್ಚುವಲ್ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಕೃಷ್ಣಾ ನಾಯಕ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಭಾರತ ಸರ್ಕಾರ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಹಿರಿಯ ಪ್ರಾದೇಶಿಕ ನಿರ್ದೇಶಕರಾದ ಡಾ.ರಾಜೇಶ ಕಡೇಮನಿ, ಬೆಂಗಳೂರಿನ ಎನ್.ಟಿ.ಐ. ನಿರ್ದೇಶಕ ಡಾ. ರವಿಚಂದ್ರ, ಆರ್.ಸಿ.ಹೆಚ್. ಅಧಿಕಾರಿ ಡಾ. ಶರಣಬಸಪ್ಪ ಖ್ಯಾತನಾಳ, ಜಿಲ್ಲೆಯ ಸರ್ವೇಕ್ಷಣೆ ಅಧಿಕಾರಿ ಡಾ. ಸುರೇಶ ಮೇಕಿನ, ಶಿವಾಜಿ ನಗರದ ವೈದ್ಯಾಧಿಕಾರಿ ಡಾ. ಸಂಧ್ಯಾರಾಣಿ, ತಾಜ್ ನಗರದ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇಣುಗೋಪಾಲ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜಕುಮಾರ ಬಾಳಿ, ಮಾಣಿಕ ಕನಕಟ್ಟಿ, ಶೇಖರೋಜಾ ಬಡಾವಣೆಯ ನಾಗರಿಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕಲಬುರಗಿ ಡಾ. ರವಿಕಾಂತ ವಿ ಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕೀಟ ಶಾಸ್ತçಜ್ಞರಾದ ಚಾಮರಾಜ ದೊಡ್ಡಮನಿ, ಕಾರ್ಯನಿರೂಪಿಸಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…