ಭಂಕೂರ ಶಾಲೆಯಲ್ಲಿ ವಿಜ್ಞಾನ ಮೇಳ 28 ರಂದು

0
79

ಚಿತ್ತಾಪುರ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಜೊತೆಗೆ ವಿಜ್ಞಾನ ವಿಷಯವನ್ನು ಸರಳವಾಗಿ ಅರ್ಥಮಾಡಿಸಲು ಚಿತ್ತಾಪುರ ತಾಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಭಂಕೂರ ಇಲ್ಲಿ ಶಾಲಾ ಮಟ್ಟದ ವಿಜ್ಞಾನ ಮೇಳ ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ವಿಜ್ಞಾನ ಮೇಳವನ್ನು ಜಿಲ್ಲಾ ಉಪನಿರ್ದೆಶಕ ಸಕ್ರೆಪ್ಪಗೌಡಾ ಬಿರಾದಾರ ಉದ್ಘಾಟಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಸಮೂಹ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

Contact Your\'s Advertisement; 9902492681

ಭಂಕೂರ ಗ್ರಾಮದ ಎಸ್.ಡಿ.ಎಂ.ಸಿ. ಅದಕ್ಷರು ಸದಸ್ಯರು ಗ್ರಾಮ ಪಂಚಾಯತಿಯ ಅದ್ಯಕ್ಷರು ಹಾಗೂ ಸದಸ್ಯರು ಸಕಲ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಶೇಷವಾಗಿ ಶಿಕ್ಷಣಪ್ರೇಮಿ ಕೆ.ಎಂ.ವಿಶ್ವನಾಥ ಮರತೂರ ಹಾಗೂ ಸಾಮಾಜಿಕ ಕಾರ್ಯಕರ್ತ ಶೇಖರ ಸೇಡಂ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ ಎಂದು ಶಾಲೆಯ ಪ್ರಧಾನ ಗುರುಗಳಾದ ಕನಕಪ್ಪ ಹಾಗೂ ಶಾಲೆಯ ಶಿಕ್ಷಕ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here